ಬೆಳ್ತಂಗಡಿ: ಕರಾಯ ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಅಂಡೆತ್ತಡ್ಕ ಸ.ಉ.ಹಿ.ಪ್ರಾ ಶಾಲೆಯ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿದೆ.
ಮೈರೊಳ್ತಡ್ಕ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಆ.21 ರಂದು ನಡೆದ ಪಂದ್ಯಾವಳಿಯಲ್ಲಿ ಎರಡು ವಿಭಾಗದ ತಂಡಗಳು ಉತ್ತಮ ಪ್ರದರ್ಶನ ನೀಡಿದರು. ಈ ಮೂಲಕ ಸತತ ನಾಲ್ಕನೇ ಬಾರಿಗೆ ತಾಲೂಕು ಮಟ್ಟದ ಪ್ರವೇಶಿಸಿದ ಹೆಗ್ಗಳಿಕೆಗೆ ಅಂಡೆತ್ತಡ್ಕ ಶಾಲೆ ಪಾತ್ರವಾಗಿದೆ.











