30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಮಚ್ಚಿನ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ

ಮಚ್ಚಿನ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 23 ರಂದು ನಡೆದ ಮಚ್ಚಿನ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಮಚ್ಚಿನ ನಮನ ಹಾಲ್ ನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪಕ್ಷದ ಪ್ರಮುಖರು ಹಿರಿಯರಾದ ಪದ್ಮನಾಭ ಅರ್ಕಜೆ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಮತಿ ವಸಂತಿ ಲಕ್ಷ್ಮಣರವರು ಉದ್ಘಾಟನಾ ಭಾಷಣ ಮಾಡಿದರು. ಶಾಸಕರಾದ ಹರೀಶ್ ಪೂಂಜರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಂಡಲ ಉಪಾಧ್ಯಕ್ಷರಾದ ಮೋಹನ್ ಅಂಡಿಂಜೆ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಮಡoತ್ಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಗೋಪಾಲ ಕೃಷ್ಣ. ಕೆ, ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಚಂದ್ರಕಾಂತ ಗೌಡ ನಿಡ್ಡಾಜೆ ಬೈಠಕ್ ನೀಡಿದರು. ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪದ್ಮನಾಭ ಸಾಲ್ಯಾನ್, ಮಚ್ಚಿನ ಪಂಚಾಯತ್ ಅಧ್ಯಕ್ಷರಾದ ರುಕ್ಮಿಣಿ, ಅಭ್ಯಾಸ ವರ್ಗ ಪ್ರಭಾರಿ ವಿಶ್ವನಾಥ ಹಾರಾಬೆ, ಮಚ್ಚಿನ ಶಕ್ತಿ ಕೇಂದ್ರ ಪ್ರಮುಖ್ ನಾರಾಯಣ ಶೆಟ್ಟಿ ನೆತ್ತರ, ಪ್ರಮುಖರು, ಜನಪ್ರತಿನಿದಿನಗಳು ಹಾಗೂ ಅನ್ಯನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು ನಾರಾಯಣ ಶೆಟ್ಟಿ ನೆತ್ತರ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಕಡಿರುದ್ಯಾವರ ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ

Suddi Udaya
error: Content is protected !!