July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಳಂತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಇಳಂತಿಲ:ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 23 ರಂದು ನಡೆದ ಇಳಂತಿಲ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಇಳಂತಿಲ ವಾಣಿಶ್ರೀ ಭಜನಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ನಾರ್ಣಪ್ಪ ಗೌಡ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರು ಉದ್ಘಾಟನಾ ಭಾಷಣ ಮಾಡಿ, ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ಕೃತವಾಗಿ ಸಮಾಲೋಚನೆ ನಡೆಸಿದರು.

ಮಂಡಲ ಪ್ರಮುಖರಾದ ರಾಜೇಶ್ ಪೆರ್ಮುಡ, ಸುಧಾಕರ ಅಡ್ಯಾರ್, ಸುಧೀರ್ ಸುವರ್ಣ ರವರು ಬೈಠಕ್ ನೀಡಿದರು. ಈ ಸಂದರ್ಭದಲ್ಲಿ , ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಗಣೇಶ್ ನಾವೂರು, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸೀತಾರಾಮ ಬೆಳಾಲ್, ತಣ್ಣೀರುಪಂಥ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಜಯಾನಂದ ಕಲ್ಲಾಪು, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೆಂಕ್ಯಾರ್,ಇಳಂತಿಲ ಶಕ್ತಿ ಕೇಂದ್ರ ಅಧ್ಯಕ್ಷರಾದ ಸುರೇಶ್ ಬಣ್ಣೆಂಗಳ,ಇಳಂತಿಲ ಪಂಚಾಯತ್ ಮಾಜಿ ಅಧ್ಯಕ್ಷರಾದ ತಿಮ್ಮಪ್ಪ ಗೌಡ, ಅನನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕೊಯ್ಯೂರು ಕೊಯಿರೊಟ್ಟು ಗುಳಿಗ ದೈವದ ನೂತನ ಕಟ್ಟೆ, ಗಗ್ಗರ ಸೇವೆ

Suddi Udaya

ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ಉದ್ಯೋಗದ ಕನಸು ನನಸು ಮಾಡಿದ ಸಂಸ್ಥೆ: ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿಕೊಡುತ್ತಿರುವ ಅನುಗ್ರಹ ಟ್ರೈನಿಂಗ್ ಕಾಲೇಜು

Suddi Udaya

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya
error: Content is protected !!