September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು, ಮೊಗ್ರು ಶಕ್ತಿ ಕೇಂದ್ರದ ಭಾಜಪ ಕಾರ್ಯಕರ್ತರ ಅಭ್ಯಾಸವರ್ಗ ಕಾರ್ಯಕ್ರಮ

ಬಂದಾರು: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 24 ರಂದು ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಬಂದಾರು ಹಾಲು ಉತ್ಪಾದಕರ ಸಂಘ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಪಾoಜಾಳ ಚೆನ್ನಪ್ಪ ಗೌಡ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಉದ್ಘಾಟನಾ ಭಾಷಣ ಮಾಡಿ, ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ಕೃತವಾಗಿ ಸಮಾಲೋಚನೆ ನಡೆಸಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವರ್, ಪಕ್ಷದ ಪ್ರಮುಖರಾದ ಸದಾನಂದ ಪೂಜಾರಿ ಊoಗಿನಬೈಲು, ಮಂಡಲ ಉಪಾಧ್ಯಕ್ಷರಾದ ಮೋಹನ್ ಅಂಡಿಂಜೆ, ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಬೈಠಕ್ ನೀಡಿದರು.

ಈ ಸಂದರ್ಭದಲ್ಲಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ್ ನಾವೂರು, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸೀತಾರಾಮ ಬೆಳಾಲ್, ಅಭ್ಯಾಸ ವರ್ಗ ಪ್ರಭಾರಿ ಕೊರಗಪ್ಪ ಗೌಡ ಚಾರ್ಮಾಡಿ, ಪದ್ಮುಂಜ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೆಂಕ್ಯಾರ್, ಬಂದಾರು ಹಾಗೂ ಮೊಗ್ರು ಶಕ್ತಿ ಕೇಂದ್ರ ಪ್ರಮುಖರಾದ ದಿನೇಶ್ ಗೌಡ, ಖಂಡಿಗ, ಗಂಗಾಧರ ಪೂಜಾರಿ, ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಕಡಮ್ಮಾಜೆ, ಮಂಡಲ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಮಹಾಬಲ ಗೌಡ,ಪ್ರಭಾರಿ ಶ್ರೀಮತಿ ಅಮಿತಾ ಕುಶಾಲಪ್ಪ, ಪೆರ್ಲ-ಬೈಪಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಉಮೇಶ್ ಗೌಡ ಅಂಗಡಿಮಜಲು,ಪಂಚಾಯತ್ ಸದಸ್ಯರು, ಸಿ.ಎ. ಬ್ಯಾಂಕ್ ನಿರ್ದೇಶಕರು, ಹಾಲು ಉತ್ಪಾದಕರ ಸಂಘ ನಿರ್ದೇಶಕರು,ಜನಪ್ರತಿನಿಧಿಗ ಳು,ಬೂತ್ ಅಧ್ಯಕ್ಷ, ಕಾರ್ಯದರ್ಶಿ ಪದಾಧಿಕಾರಿಗಳು, ಅನನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ಡೊoಬಯ್ಯ ಗೌಡ ಖಂಡಿಗ ಸ್ವಾಗತಿಸಿ, ವಕೀಲರಾದ ಉದಯ ಬಿ.ಕೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Suddi Udaya

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ

Suddi Udaya

ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

Suddi Udaya
error: Content is protected !!