25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನವನ್ನು ಮಾತ್ರ ಅವಲಂಬಿಸದೆ ಸೃಜನಾತ್ಮಕ ಹಾಗೂ ತಾರ್ಕಿಕ ಚಿಂತನಾ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಯುಐಪಾತ್ ಆಟೋಮೆಷನ್ ಡೆವಲಪರ್ ಜಿಬಿನ್ ಟಿ.ವಿ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನ ಐಟಿ ಕ್ಲಬ್ ನ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಇಂಡಸ್ಟ್ರಿ ಟ್ರೆಂಡ್ಸ್’ ಎಂಬ ವಿಷಯದ ಕುರಿತು ಮಾತನಾಡುತ್ತಾ, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಎ ಐ) ಆಧುನಿಕ ಕಾರ್ಪೊರೇಟ್ ಕ್ಷೇತ್ರದಲ್ಲಿ ಅಥವಾ ಕೈಗಾರಿಕೆಗಳಲ್ಲಿ ಹೆಚ್ಚೆಚ್ಚು ಉದ್ಯೋಗವಕಾಶಗಳನ್ನು ನೀಡಲು ಸಹಕಾರಿಯಾಗುತ್ತದೆ. ಕಂಪ್ಯೂಟರ್ ಸೈನ್ಸ್ ನ ಮೂಲಭೂತ ಮಹತ್ವವನ್ನು ತಿಳಿದು, ಅದರಲ್ಲಿ ವಿಶೇಷವಾದ ಜ್ಞಾನವನ್ನು ಗಳಿಸಿ, ಉತ್ತಮ ಉದ್ಯೋಗವನ್ನು ಪಡೆದುಕೊಂಡು ಇಲ್ಲವೇ ಉದ್ಯಮಗಳನ್ನು ಪ್ರಾರಂಭಿಸಿ ಸ್ವಾಭಿಮಾನದ ಜೀವನ ನಡೆಸಬಹುದು ಎಂದರು.

ಕಾಲೇಜಿನ ಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸುಧೀರ್ ಕೆ ಎನ್, ಐಟಿ ಕ್ಲಬ್ ನ ಸಂಯೋಜಕರಾದ ಶ್ರೀಮತಿ ಕಾಮಾಕ್ಷಿ, ದೀಕ್ಷಿತಾ, ವಿದ್ಯಾರ್ಥಿ ಪ್ರತಿನಿಧಿ ಅನ್ವಿತಾ ಉಪಸ್ಥಿತರಿದ್ದರು.
ಸಪ್ತಮಿ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ನಿಶಿತಾ ವಿದ್ಯಾರ್ಥಿಗಳಿಗೆ ನಡೆಸಿದ ಸ್ಪರ್ಧೆಗಳ ವಿಜೇತರ ವಿವರ ನೀಡಿದರು.


ಜಯಂತ್ ಸ್ವಾಗತಿಸಿದರು. ಶ್ರಾವ್ಯ ಧನ್ಯವಾದವಿತ್ತರು. ಸಮೀಕ್ಷಾ, ನಿಶ್ಮಿತಾ, ರೆನ್ವಿಟಾ ಕಾರ್ಯಕ್ರಮ ನಿರೂಪಿಸಿದರು.

Related posts

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

Suddi Udaya

ನಾವೂರು: ಕಾಂತಪ್ಪ ಮೂಲ್ಯರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!