32.9 C
ಪುತ್ತೂರು, ಬೆಳ್ತಂಗಡಿ
March 6, 2026
ರಾಜಕೀಯ

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ

ನಾರಾವಿ :ಭಾರತೀಯ ಜನತಾ ಪಾರ್ಟಿ ದ.ಕ ಜಿಲ್ಲೆ ಮತ್ತು ಬೆಳ್ತಂಗಡಿ ಮಂಡಲದ ವತಿಯಿಂದ ಆಗಸ್ಟ್ 24 ರಂದು ನಾರಾವಿ ಕಾಶಿಮಠ ಸಭಾಂಗಣದಲ್ಲಿ ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ ನಡೆಯಿತು.ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ,ಮಂಡಲದ ಉಪಾಧ್ಯಕ್ಷರಾದ ಮೋಹನ್ ಅಂಡಿಂಜೆ, ಹಿರಿಯ ಕಾರ್ಯಕರ್ತರಾದ ರತ್ನಾಕರ ಭಟ್,ಚೆಲುವಯ್ಯ ಪೂಜಾರಿ ಮತ್ತು ಕಾಂತಪ್ಪ ಮೂಲ್ಯರವರು ದೀಪ ಬೆಳಗಿಸಿ,ಭಾರತ ಮಾತೆಗೆ ಪುಷ್ಪಾರ್ಚನೆಗೈದು ಕಾರ್ಯಕ್ರಮ ಉದ್ಘಾಟಿಸಿದರು.ಸಂಘಟನಾ ಅವಧಿಯಲ್ಲಿ ದ.ಕ ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲ್ ಮತ್ತು ವೇಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಉಮೇಶ್ ನಡ್ತಿಕಲ್ಲು ಸಮಯೋಚಿತವಾಗಿ ಬೈಠಕ್ ನೀಡಿದರು.


ಅಭ್ಯಾಸವರ್ಗದ ಸಮಾರೋಪ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಭಾಗವಹಿಸಿ ಕಾರ್ಯಕರ್ತ ಬಂಧುಗಳಿಗೆ ರಾಷ್ಟ್ರೀಯತೆ,ಹಿಂದುತ್ವ ಮತ್ತು ಪಕ್ಷ ಸಂಘಟನೆಯ ಬಗ್ಗೆ ವಿಶೇಷ ಮಾರ್ಗದರ್ಶನ ನೀಡಿದರು. ಈ ಸಂದರ್ಭ ವೇದಿಕೆಯಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜವರ್ಮ ಜೈನ್,ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರಾ ಮತ್ತು ಕೃಷಿ ಪತ್ತಿನ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ ಭಂಡಾರಿ ಉಪಸ್ಥಿತರಿದ್ದರು.
ಅಭ್ಯಾಸವರ್ಗದಲ್ಲಿ ನಾರಾವಿ ಮತ್ತು ಕುತ್ಲೂರು ಶಕ್ತಿಕೇಂದ್ರ ಪ್ರಮುಖರಾದ ಪ್ರಕಾಶ್ ಆಚಾರ್ಯ, ರತ್ನಾಕರ ಬಡೆಕ್ಕಿಲ,ಮಂಡಲ ಸಾಮಾಜಿಕ ಜಾಲತಾಣ ಸಹ ಸಂಚಾಲಕ ರಂಜಿತ್ ಮರೋಡಿ,ನಾರಾವಿ ಮತ್ತು ಕುತ್ಲೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ಮತ್ತು ನಿರ್ದೇಶಕರುಗಳು,ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳು,ನಾರಾವಿ ಗ್ರಾಮ ಪಂಚಾಯತ್ ಸದಸ್ಯರುಗಳು,ಮಂಡಲ ಮತ್ತು ಮೋರ್ಚಾದ ಪದಾಧಿಕಾರಿಗಳು,ಬೂತ್ ಸಮಿತಿಯ ಪದಾಧಿಕಾರಿಗಳು,ಪ್ರಮುಖರು,ಹಿರಿಯರು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.ಮುರಾರಿ ರಾವ್ ಹೊಳೆಹೊದ್ದು ಬಿಜೆಪಿ ಗೀತೆ ಹಾಡಿದರು. ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಉದಯ್ ಹೆಗ್ಡೆ ಸ್ವಾಗತಿಸಿದರು. ಬಿಜೆಪಿ ಮಹಾಶಕ್ತಿ ಕೇಂದ್ರ ನಾರಾವಿಯ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂರಿಂದ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶೇಷ ಪೂಜೆ

Suddi Udaya

ಅಸಂಘಟಿತ ಕಾರ್ಮಿಕ ನಗರ ಸಮಿತಿ & ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ & ಕಾರ್ಯಕರ್ತರ ಸಮಲೋಚನೆ ಸಭೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ; ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಬೃಹತ್ ಸಮಾವೇಶ

Suddi Udaya

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya
error: Content is protected !!