March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿಎಂಬ್ರಾಡರಿ ಮತ್ತು ಫ್ಯಾಬ್ರಿಕ್ ಪೇಟಿಂಗ್ ತರಬೇತಿಯ ಸಮಾರೋಪ

ಉಜಿರೆ : ನಾವು ಕೈ ಗೊಳ್ಳುವ ವೃತ್ತಿಯಲ್ಲಿ ಬದ್ಧತೆ ಬಹುಮುಖ್ಯ. ನೀವು ಮಾಡುವ ಕೆಲಸದಲ್ಲಿ ಕಾರ್ಯಕ್ಷಮತೆ ಅನ್ನುವುದನ್ನು ಅಳವಡಿಸಿಕೊಂಡು ಆತ್ಮವಿಶ್ವಾಸ ಬೆಳೆಸಿಕೊಂಡು ಮುಂದುವರೆಯಬೇಕು. ವಿಶೇಷವಾಗಿ ಮಹಿಳೆಯರು ಸಮತೋಲನೆಯೊಂದಿಗೆ ಕೆಲಸ ಮಾಡಬೇಕಾಗುತ್ತದೆ. ಅದಕ್ಕಾಗಿ ಸಮಯ ನಿರ್ವಹಣೆ ಮಾಡಿಕೊಳ್ಳಿ. ಗ್ರಾಹಕರ ಜೊತೆಗೆ ಉತ್ತಮ ಸಂವಹನ ಮಾಡಿ. ಉತ್ತಮವಾದ ಮನೋಭಾವ ಬೆಳಸಿಕೊಳ್ಳಿ. ಸರಕಾರದ ಮತ್ತು ಬ್ಯಾಂಕಿನ ಆರ್ಥೀಕ ಸಹಕಾರ ಪಡೆದುಕೊಂಡು ಮುಂದುವರೆಯಿರಿ. ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಇಂತಹ ಒಂದು ಉತ್ತಮವಾದ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಇದರ ಸದುಪಯೋಗಪಡಿಸಿಕೊಳ್ಳಿ ಇಲ್ಲಿ ಕಲಿತ ವಿಷಯಗಳನ್ನು ಉಪಯೋಗಿಸಿಕೊಂಡು ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಸ್ವದೇಶಿ ವಿಷಯಗಳ ಕಡೇ ಗಮನಹರಿಸಿ ಎಂದು ಉಜಿರೆಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ ಕಾರಂತ್ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 31 ದಿನಗಳ ಕಾಲ ನಡೆದ ಎಂಬ್ರಾಡರಿ ಮತ್ತು ಫ್ಯಾಬ್ರಿಕ್ ಪೇಟಿಂಗ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತರಿಸಿ ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ.ವಿಜಯ ಕುಮಾರ್ ವಹಿಸಿ, ಮಾತನಾಡಿ ಸ್ವ ಉದ್ಯೋಗಕ್ಕೆ ಬೇಕಾದ ಸಾಲ ಸೌಲಭ್ಯಗಳಿಗೆ ಯೋಜನಾ ವರದಿಯನ್ನು ತಯಾರಿಸಿಕೊಂಡು ಬ್ಯಾಂಕ್ ಗಳನ್ನು ಸಂಪರ್ಕ ಮಾಡಿ ಎಂದು ತಿಳಿಸಿದರು.


ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಅತಿಥಿಗಳನ್ನು ಸ್ವಾಗತಿಸಿದರು.ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಕೆ.ಕರುಣಾಕರ ಜೈನ್ ವಂದಿಸಿದರು. ಮೋನಿಕ್ ಮತ್ತು ಕುಮಾರಿ ಪ್ರಾರ್ಥನೆ ಮಾಡಿದರು, ಶ್ರೀಮತಿ ಪ್ರೀತಾ ಮತ್ತು ತಂಡ ಪ್ರಾರ್ಥನೆ ನೆರವೇರಿಸಿದರು. ಪೂಜಶ್ರೀ, ಭವ್ಯ , ಲಾವಣ್ಯ ತರಬೇತಿಯ ಅನುಭವ ಹಂಚಿಕೊಂಡರು.

Related posts

ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಗುರುವಾಯನಕೆರೆ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯುತ್ತಮ ಮೂರು ಎಸ್.ಡಿ.ಎಂ.ಸಿ ಶಾಲೆ ಆಯ್ಕೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಉಜಿರೆಯ ಪ್ರಣಮ್ಯ ಎಂ.ಕೆ. ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!