23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್‌.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

ಬೆಳ್ತಂಗಡಿ: ಸುಮಾರು 12 ವಷ೯ಗಳ‌ ಹಿಂದೆ ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಸೌಜನ್ಯ ತಾಯಿ ಕುಸುಮಾವತಿ ಅವರು ಎಸ್‌.ಐ.ಟಿ ಅಧಿಕಾರಿಗಳಿಗೆ ಆ. 28 ರಂದು ದೂರು ನೀಡಿದ್ದು ದೂರನ್ನು ಸ್ವೀಕರಿಸಿದ ಅಧಿಕಾರಿಗಳು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹಿಂಬರಹ ನೀಡಿದ್ದಾರೆ.

ಸೌಜನ್ಯ ತಾಯಿ ಕುಸುಮಾವತಿ ಹಾಗೂ ಮನೆಯವರು ಗುರುವಾರ ಮಧ್ಯಾಹ್ನ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದುಅಧಿಕಾರಿಗಳ ಸೂಚನೆಯ ಮೇರೆಗೆ ಆರಂಭದಲ್ಲಿ ಅಲ್ಲಿಂದ ಹಿಂತಿರುಗಿದ್ದರು. ಆದರೆ ಬಳಿಕ ಅಧಿಕಾರಿಗಳ ಸೂಚನೆಯಂತೆ ಸೌಜನ್ಯ ತಾಯಿ ಕುಸುಮಾವತಿ ಎಸ್.ಐ.ಟಿ ಕಚೇರಿಗೆ ಬಂದು ದೂರನ್ನು ನೀಡಿದ್ದಾರೆ.

ಸಾಕ್ಷಿದೂರು ದಾರನಾಗಿ ಬಂದ ಚೆನ್ನಯ್ಯ ಯುಟ್ಯೂಬ‌ರ್ ಗಳಿಗೆ ನೀಡಿದ ಸಂದರ್ಶನದಲ್ಲಿ ಸೌಜನ್ಯ ಪ್ರಕರಣದ ಬಗ್ಗೆ ಹಲವು ಹೇಳಿಕೆಗಳನ್ನು ನೀಡಿದ್ದ ಈ ಹಿನ್ನಲೆಯಲ್ಲಿ ಈ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿರುವುದಾಗಿ ತಿಳಿದು ಬಂದಿದೆ. ದೂರಿನ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.

Related posts

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಣಿಯೂರು ವಲಯದ ಮೈರೋಲ್ತಡ್ಕ, ಮೊಗ್ರು, ಬಂದಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆಗೆ ರಾಜ್ಯಮಟ್ಟದಲ್ಲಿ ತೃತೀಯ ಬಹುಮಾನ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya
error: Content is protected !!