September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.3: ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಪಟ್ಟಾಭಿಷೇಕ ವರ್ಧಂತಿ

ಧರ್ಮಸ್ಥಳ :ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾ ಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಇವರ ಪಟ್ಟಾಭಿಷೇಕದ 17ನೇ ವರ್ಧಂತ್ಯುತ್ಸವ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದಲ್ಲಿ ಸೆ. 3 ರಂದು ಬೆಳಿಗ್ಗೆ 11ಕ್ಕೆ ಜರಗಲಿದೆ.

ದಕ್ಷಿಣದ ಅಯೋಧ್ಯೆ ಎಂದೇ ಖ್ಯಾತಿ ಪಡೆದ ಶ್ರೀ ರಾಮ ಕ್ಷೇತ್ರದ ನಿರ್ಮಾತೃ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸಂಕಲ್ಪದಂತೆ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರು ವಿವಿಧ ಶಾಖಾ ಮಠಗಳನ್ನು ಸ್ಥಾಪಿಸಿ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ರಾಮ ಜನ್ಮ ಭೂಮಿ ಅಯೋದ್ಯೆಯಲ್ಲಿ ಶಾಖಾ ಮಠ ನಿರ್ಮಾಣದ ಕಾಮಗಾರಿ ಆರಂಭ ಗೊಂಡಿದೆ. ತಮ್ಮ ಪಟ್ಟಾಭಿಷೇಕದ ದಶಮಾನೋತ್ಸವ ಸಂದರ್ಭದಲ್ಲಿ ಯಶಸ್ವಿಯಾಗಿ ರಾಷ್ಟ್ರೀಯ ಧರ್ಮ ಸಂಸದ್ ಆಯೋಜಿಸಿ ಜನಮಾನಸದಲ್ಲಿ ಉಳಿಯುವಂತೆ ಮಾಡಿದರು.


ಕಳೆದ 6 ವರ್ಷಗಳಿಂದ ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿದ್ದು, ಈ ವರ್ಷ ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲೂಕು ಕೋನಳ್ಳಿ ವನದುರ್ಗಾ ದೇವಸ್ಥಾನದಲ್ಲಿ ಜು.10ರಿಂದ ಆ.20ರವರೆಗೆ ಚಾತುರ್ಮಾಸ್ಯ ವ್ರತಾಚಾರಣೆ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಪ್ರತಿದಿನ ಭಜನೆ ಯಕ್ಷಗಾನ, ತಾಳಮದ್ದಳೆ, ಭರತನಾಟ್ಯ ವೈಭವ, ಗೀತಾ ರೂಪಕ ಸೇರಿದಂತೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗಿತ್ತು ಗಣ್ಯರು, ಜನ ಪ್ರತಿನಿಧಿಗಳು, ಸ್ವಾಮೀಜಿಯವರ ಶಿಷ್ಯವೃಂದದವರು ಸೇರಿದಂತೆ ದೇಶಾದ್ಯಾಂತದಿಂದ ಸುಮಾರು ಎರಡು ಲಕ್ಷ ಭಕ್ತರು ಭೇಟಿ ನೀಡಿ ಗುರುಗಳಿಂದ ಮಂತ್ರಾಕ್ಷತೆ ಸ್ವೀಕರಿಸಿ ಆಶೀರ್ವಾದ ಪಡೆದು ಕೊಂಡರು.

ಸೆ.3ರಂದು ನಡೆಯುವ ಪಟ್ಟಾಭಿಷೇಕದ 17ನೇ ವರ್ಧಂತ್ಯುತ್ಸವ ಸಮಾರಂಭ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಸಚಿವರು, ಶಾಸಕರು, ಸಂಸದರು, ಮಾಜಿ ಶಾಸಕರು, ಮಾಜಿ ಸಂಸದರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್.ಇ) ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ರಕ್ಷಿತ್ ಶಿವರಾಂ ದೂರಿನ ಮೇರೆಗೆ ಸಚಿವರು ಸಭೆ ನಡೆಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ :ಪುದುವೆಟ್ಟು ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya
error: Content is protected !!