July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಳ್ತಂಗಡಿ : ದಿನಾಂಕ 01-03-2014 ರಂದು ಬೆಳ್ತಂಗಡಿ ಉಜಿರೆಯಲ್ಲಿರುವ ವಸತಿಗೃಹದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ: 126/2014, ಕಲಂ:302.201 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಪ್ರಕರಣದ ಆರೋಪಿಯಾದ ಚಿಕ್ಕಮಗಳೂರು ನಿವಾಸಿ ಬಾಳಪ್ಪ ಎಂ ಕಳ್ಳೊಳ್ಳಿ ಎಂಬಾತನನ್ನು ಬಂಧಿಸಿ, ವಿಚಾರಣೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರಾದ ಲಿಂಗಪ್ಪ ಪೂಜಾರಿ ರವರು ಸೂಕ್ತ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಬೆಳ್ತಂಗಡಿ cj&jmfc ನ್ಯಾಯಾಲಯಕ್ಕೆ ದೋಷರೊಪಾಣಾ ಪಟ್ಟಿಯನ್ನು ಸಲ್ಲಿಸಿರುತ್ತಾರೆ.

ಸದ್ರಿ‌ ಪ್ರಕರಣದಲ್ಲಿ ಹೆಚ್ಚುವರಿಯಾಗಿ ಅಳವಡಿಸಲಾದ ಪರಿಶಿಷ್ಟ ಜಾತಿ ಮತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿ, ತನಿಖೆ ನಡೆಸಿದ ಆಗಿನ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅದೀಕ್ಷಕರಾಗಿದ್ದ ರಾಹುಲ್ ಕುಮಾರ್ ಶಹಪುರ್ ಐ.ಪಿ.ಎಸ್ ರವರು ಹೆಚ್ಚುವರಿ ದೋಷಾರೋಪಣಾ ಪಟ್ಟಿಯನ್ನು 2ನೇ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಲಯ ಮಂಗಳೂರಿಗೆ ಸಲ್ಲಿಸಿರುವುದಾಗಿದೆ.‌

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ರವರು ಆ. 28 ರಂದು ಆರೋಪಿ ಬಾಳಪ್ಪ ಎಂ ಕಳ್ಳೊಳ್ಳಿ ಎಂಬಾತನಿಗೆ ಐಪಿಸಿ ಸೆಕ್ಷನ್‌ 302 ರಡಿಯಲ್ಲಿ – ಜೀವಾವಧಿ ಶಿಕ್ಷೆ + ರೂ.15,000/- ದಂಡ (ಪಾವತಿಸದಿದ್ದರೆ 6 ತಿಂಗಳು ಹೆಚ್ಚುವರಿ ಜೈಲು). ಪಿಸಿ ಸೆಕ್ಷನ್‌ 201 ರಡಿಯಲ್ಲಿ– 2 ವರ್ಷಗಳ ಸರಳ ಜೈಲು + ರೂ.5,000/- ದಂಡ (ಪಾವತಿಸದಿದ್ದರೆ 3 ತಿಂಗಳು ಹೆಚ್ಚುವರಿ ಜೈಲು) ವಿಧಿಸಿ ಅದೇಶಿಸಿರುತ್ತದೆ.

ಪ್ರಕರಣದ ವಿಚಾರಣೆಯಲ್ಲಿ ಸರ್ಕಾರಿ ಅಭಿಯೋಜಕರಾಗಿ ಜ್ಯೋತಿ ಪಿ ನಾಯಕ್ ರವರು ವಾದ ಮಂಡಿಸಿರುತಾರೆ. ಪ್ರಕರಣದ ತನಿಖೆಯಲ್ಲಿ ತನಿಖಾ ಸಹಾಯಕರಾಗಿ ಎ.ಎಸ್.ಐ ಕಲೈಮಾರ್ ರವರು ಹಾಗೂ ನ್ಯಾಯಾಲಯ ಸಿಬ್ಬಂದಿಯಾಗಿ ಮಲ್ಲಿಕಾರ್ಜುನ್ (pc2293) ರವರು ಕರ್ತವ್ಯ ನಿರ್ವಹಿಸಿರುತ್ತಾರೆ.

Related posts

ಬೆಳ್ತಂಗಡಿ ವಕೀಲರ ಸಂಘ ದಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಭೇಟಿ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಗೆ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಉಜಿರೆ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023’

Suddi Udaya
error: Content is protected !!