24.7 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

ಬೆಳ್ತಂಗಡಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ವಾಹನಕ್ಕೆ ಡಿಕ್ಕಿ ಹೊಡೆದ ಪ್ರಕರಣ ಸಂಬಂಧ ಮೂವರು ಆರೋಪಿಗಳಾದ ಉಜಿರೆ ನಿವಾಸಿಗಳಾದ ಸೃಜನ್ ಎಲ್, ಹಿತೇಶ್ ಶೆಟ್ಟಿ, ಸಹನ್ ಗೆ ಉಡುಪಿ ನ್ಯಾಯಾಲಯ ಆ.28 ರಂದು ಜಾಮೀನು ಮಂಜೂರು ಮಾಡಿದೆ.

ಪ್ರಕರಣ ವಿವರ: ಆ. 21 ರಂದು ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025 ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತನಾದ ಮಹೇಶ್ ಶೆಟ್ಟಿ ತಿಮರೋಡಿ ರವರನ್ನು ಉಜಿರೆ ನಿವಾಸದಿಂದ ವಶಕ್ಕೆ ಪಡೆದುಕೊಂಡು ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವಾಗ ಅವರ ಬೆಂಬಲಿಗರು ಪೊಲೀಸ್ ವಾಹನಗಳನ್ನು ಹಿಂಬಾಲಿಸಿಕೊಂಡು ಬಂದಿದ್ದು ಎಸ್ಟೇ ಬಾರಿ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಂದು ಕರ್ತವ್ಯಕ್ಕೆ ಅಡ್ಡಿ ಪಡಿಸಬೇಡಿ ಎಂದು ಸೂಚನೆ ನೀಡಿದರು ಪಾಲಿಸದೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ್ಮಾರ್ ಹೆದ್ದಾರಿಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸುವಂತೆ ಬಂದು ಸದ್ರಿ ತಂಡದಲ್ಲಿದ್ದ ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಇಲಾಖಾ ವಾಹನ ನಂಬರ್ KA-20-G-0669 ವಾಹನಕ್ಕೆ KA-70-M-3048 ಬಿಳಿ ಬಣ್ಣದ ಶಿಫ್ಟ್ ಕಾರು ಡಿಕ್ಕಿ ಹೊಡೆದು ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪ್ರಕರಣದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗದಂತೆ ಅಡ್ಡಿಪಡಿಸಿದ್ದರಿಂದ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗನ್ ಮ್ಯಾನ್ ಅ ಕ್ರ 99/2025 0 132, 121(1), 281, 3(5) ಬಿ ಎನ್ ಎಸ್ 2023 ಮತ್ತು ಕಲಂ 3 KPDL Act ರಂತೆ ಆ 21 ರಂದು ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಉಜಿರೆ ನಿವಾಸಿಗಳಾದ ಸೃಜನ್ ಎಲ್, ಹಿತೇಶ್‌ ಶೆಟ್ಟಿ, ಸಹನ್ ಎಂಬವರನ್ನು ಬಂಧಿಸಿ ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಆ.28 ರಂದು ಉಡುಪಿ ಕೋರ್ಟ್ ನಿಂದ ಮೂವರಿಗೂ ಜಾಮೀನು ಮಂಜೂರು ಮಾಡಲಾಗಿದ್ದು ಜೈಲಿನಿಂದ ಬಿಡುಗಡೆ ಮಾಡಿದ್ದಾರೆ.

Related posts

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ನಾಳೆ(ಜೂ.25): ಬೆಳ್ತಂಗಡಿ ವಕೀಲರ ಸಂಘದ ಗ್ರಂಥಾಲಯ ಮತ್ತು ಜನರೇಟರ್ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

Suddi Udaya
error: Content is protected !!