September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಆ. 29 ರಂದು ಗ್ರಾಮ ಪಂಚಾಯತ್ ಸಭಾವನದಲ್ಲಿ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಜನಾರ್ದನ ಸಭೆಯನ್ನು ಮುನ್ನಡೆಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾವಾರು ಮಾಹಿತಿ ನೀಡಿದರು. ಈ ವೇಳೆ ಪವರ್ ಮ್ಯಾನ್ ಗಳಾದ ಮಹಾಂತೇಶ್, ರಮೇಶ್ ಹಾಗೂ ಆನಂದ್ ಅವರನ್ನು ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಲಾಯಿತು.

ಉಪಾಧ್ಯಕ್ಷೆ ಗೀತಾ, ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಸಂಜೀವಿನಿ ಒಕ್ಕೂಟದ ಸದಸ್ಯರು, ಕೃಷಿ ಮತ್ತು ಪಶು ಸಖಿಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್ ಸ್ವಾಗತಿಸಿದರು.

Related posts

ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ

Suddi Udaya

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶಾಂತಾ ಶೆಟ್ಟಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಭಾರತೀಯ ಮಜ್ದೂರ್ ಸಂಘದಿಂದ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

Suddi Udaya

ಉಪನ್ಯಾಸಕ ಕೇಶವ ಬಂಗೇರರಿಗೆ ಡಾಕ್ಟರೇಟ್ ಪದವಿ

Suddi Udaya

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya
error: Content is protected !!