25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೂಡುಜಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 10 ಡಿವಿಡೆಂಟ್

ನಿಡ್ಲೆ: ಇಲ್ಲಿಯ ಬೂಡುಜಾಲು ಹಾಲು ಉತ್ಪಾದಕರ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.28ರಂದು ಸಂಘದ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮಿಥುನ್ ಕೆ. ರವರು ವಹಿಸಿ ಮಾತನಾಡಿ ಸಂಘವು ರೂ. 409395 ನಿವ್ವಳ ಲಾಭಗಳಿಸಿದ್ದು, ಸದಸ್ಯರಿಗೆ ಬೋನಸ್ ಶೇ. 65 ಹಾಗೂ ಡಿವಿಡೆಂಟ್ ಶೇ.10 ನೀಡಿದೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಹಾಲು ಒಕ್ಕೂಟ ವಿಸ್ತರಣಾಧಿಕಾರಿ ರಾಜೇಶ್ ಪಿ.ಕೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಸುದೀಂದ್ರ ರಾವ್ , ನಾರಾಯಣ ಎನ್ , ಸೇಸಪ್ಪ ಗೌಡ, ಬಾಬು ಎಂ.ಕೆ. , ಗಿರೀಶ್ ಗೌಡ , ರಮಣಿ ಬಿ., ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಯಶೋಧಾ, ವಿದ್ಯಾಲತಾ ಪ್ರಾರ್ಥಿಸಿದರು. ಕಾರ್ಯದರ್ಶಿ ವೆಂಕಟೇಶ್ ಗೌಡ ವರದಿ ವಾಚಿಸಿದರು. ಉಪಾಧ್ಯಕ್ಷ ಕೊರಗಪ್ಪ ಗೌಡ ಸ್ವಾಗತಿಸಿ, ನಿರೂಪಿಸಿದರು. ನಿರ್ದೇಶಕ ಮೋನಪ್ಪ ಗೌಡ ವಂದಿಸಿದರು.

Related posts

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮುದ್ದು ಕಂದ ಫೋಟೋ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಫೆ.20 ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಾಂಸ್ಕೃತಿಕ ವೈಭವ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ

Suddi Udaya
error: Content is protected !!