ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಕಳೆಂಜ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 30 ರಂದು ನಡೆದ ಕಳೆಂಜ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಉಮಾಮಹೇಶ್ವರ ದೇವಸ್ಥಾನದ ಶಿವಪಾರ್ವತಿ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪಕ್ಷದ ಹಿರಿಯ ಕಾರ್ಯಕರ್ತರಾದ ಕೃಷ್ಣಪ್ಪ ಎಂ.ಕೆ.ನಿಡ್ಡಾಜೆ, ಆನಂದ ಗೌಡ ಮರಕ್ಕಡ, ವಾಸಪ್ಪ ಗೌಡ ನಾಯೆರ್ಮಾರ್, ಚೋಮ ಪರಪ್ಪು ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಿಡ್ಲೆ ಕೃಷಿ ಪತ್ತಿನ ಸೇವಾ ಸಹಕಾರಿ ಬ್ಯಾಂಕ್ ನ ಮಾಜಿ ನಿರ್ದೇಶಕರಾದ ರಮೇಶ್ ರಾವ್ ಕಾಯಡ ಉದ್ಘಾಟನಾ ಭಾಷಣ ಮಾಡಿದರು. ಕಣಿಯೂರು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಯುವ ವಕೀಲರಾದ ಯತೀಶ್ ಪಣೆಕ್ಕರ, ಗೋಪಾಲ ಕೃಷ್ಣ ಮಡoತ್ಯಾರು, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸೀತಾರಾಮ ಬೆಳಾಲು, ರವರು ಬೈಠಕ್ ನೀಡಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಸಮಾರೋಪ ಭಾಷಣ ಮಾಡಿ, ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ. ಕೆ, ಅಭ್ಯಾಸ ವರ್ಗದ ಸಂಚಾಲಕರಾದ ಕೊರಗಪ್ಪ ಗೌಡ ಚಾರ್ಮಾಡಿ, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಕಳೆಂಜ, ಪಂಚಾಯತ್ ಉಪಾಧ್ಯಕ್ಷ ಮಂಜುನಾಥ್ ಹಾರಿತ್ತಕಜೆ, ಕಳೆಂಜ ಪಂಚಾಯತ್ ಸದಸ್ಯರುಗಳು, ಬೂತ್ ಅಧ್ಯಕ್ಷರುಗಳು, ಪದಾಧಿಕಾರಿಗಳು, ಹಾಗು ಅನನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ವಿತರಣೆ

Suddi Udaya

ಜೂ.30: ನಿಮ್ಮ ಸೌಂದರ್ಯದ ರಾಯಭಾರಿ “ನೂರಾ ಗೋಲ್ಡ್ & ಡೈಮಂಡ್ಸ್” ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 95.7 ಫಲಿತಾಂಶ

Suddi Udaya
error: Content is protected !!