25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಯಕ್ಷಗಾನದ ನೂತನ ರಂಗಸ್ಥಳದ ಚೌಕಟ್ಟು ಉದ್ಘಾಟನೆ

ಉಜಿರೆ: ಪುರಾಣದಿಂದಲೂ ಕಲಿಕೆ ಎನ್ನುವುದು ನಿರಂತರ ಪ್ರಕ್ರಿಯೆಯಾಗಿದೆ ಮತ್ತು ವ್ಯಕ್ತಿತ್ವ ಅಭಿವೃದ್ಧಿಯ ಪ್ರಮುಖ ಭಾಗವಾಗಿದೆ.ಹಾಗಾಗಿ ಕಲಿಕೆ ಎನ್ನುವುದು ತಕ್ಷಣಕ್ಕೆ ಮುಗಿಯುವುದಲ್ಲ ಅದೊಂದು ಮುಗಿಯದ ಅಧ್ಯಾಯ ಎಂದು ಖ್ಯಾತ ಯಕ್ಷಗಾನ ಕಲಾವಿದ, ವಾಗ್ಮಿ ದಿನೇಶ್ ಶೆಟ್ಟಿ ಕಾವಳಕಟ್ಟೆ ಅಭಿಪ್ರಾಯಪಟ್ಟರು.

ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಇತ್ತೀಚಿಗೆ ಆಯೋಜಿಸಲಾಗಿದ್ದ ಯಕ್ಷಗಾನದ ನೂತನ ರಂಗಸ್ಥಳದ ಚೌಕಟ್ಟು ಉದ್ಘಾಟನೆ ಕಾರ್ಯಕ್ರಮ ಮತ್ತು “ವಿಶ್ವಮಾನವ ಶ್ರೀ ರಾಮಚಂದ್ರ” ಎಂಬ ವಿಷಯದ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.

ವಿಶ್ವಮಾನವ ಗುಣಗಳುಳ್ಳ ಶ್ರೀರಾಮನ ಆದರ್ಶಗಳನ್ನು ವಿದ್ಯಾರ್ಥಿಗಳು ವರ್ತಮಾನದಲ್ಲಿ ರೂಢಿಸಿಕೊಳ್ಳುವ ಅವಶ್ಯಕತೆ ಇದೆ. ಸಧ್ಯ ಧರ್ಮಸ್ಥಳದಂತಹ ಪವಿತ್ರ ಕ್ಷೇತ್ರದ ಹೆಸರು ಮಾಡುವ ಹುನ್ನಾರಗಳು ನಡೆಯುತ್ತಿರುವುದು ಶೋಚನೀಯ. ಪ್ರತಿಯೊಂದು ದೇವಾಲಯವು ಕೂಡ ನಮ್ಮ ಸಮೃದ್ಧ ಹಿಂದು ಸಂಸ್ಕೃತಿಯ ಆಸ್ತಿಗಳು ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವಜನತೆಯ ಮೇಲೆ ಇದೆ ಎಂದರು.

ಧರ್ಮಸ್ಥಳ ಕ್ಷೇತ್ರದ ರೀತಿ ಪ್ರತಿಯೊಂದು ದೇವಾಲಯಗಳು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡರೆ ಭಾರತ ರಾಮ ರಾಜ್ಯ ಆಗುವುದರಲ್ಲಿ ಅನುಮಾನವಿಲ್ಲ. ಹಿಂದೂ ದೇವಾಲಯಗಳು ಮೇಲೆ ಆಗುತ್ತಿರುವ ಧೋರಣೆಗಳನ್ನು ತಡೆಗಟ್ಟುವಲ್ಲಿ ಯುವಜನತೆ ಶ್ರಮಿಸಬೇಕು. ಎಂದವರು ಕಿವಿಮಾತು ಹೇಳಿದರು.

ಕಲಾಕೇಂದ್ರದ ಮಾತೃ ಸ್ವರೂಪಿ, ಸೋನಿಯಾ ಯಶೋವರ್ಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. “ಬೆಳಗಿದ ದೀಪ ನಿಮ್ಮ ಬಾಳಿಗೆ ಹಾಗೂ ಕಲಾ ಕೇಂದ್ರಕ್ಕೆ ಬೆಳಕಾಗಲಿ ಎಂದು ಹಾರೈಸಿ, ಕಲೆಯನ್ನು ಮೈಗೂಡಿಸಿಕೊಂಡರೆ ಕಾಲೇಜಿನಲ್ಲಿ ಓದಿದ ವಿಷಯಗಳು ಬೇಗ ಅರ್ಥ ಆಗುವುದರ ಜೊತೆಗೆ ಏಕಾಗ್ರತೆ ಹೆಚ್ಚಾಗುತ್ತದೆ. ನಿಮ್ಮ ಜೀವನದ ಹಾದಿಯಲ್ಲಿ ನಿಮ್ಮ ಬುದ್ದಿ ಯನ್ನು ಬೇರೆಯವರು ನಡೆಸಲು ಬಿಡಬೇಡಿ, ಸರಿ ತಪ್ಪುಗಳನ್ನು ಅರಿತು ವಿಶ್ಲೇಷಿಸಿ ಮುಂದುವರೆದರೆ ಯಶಸ್ಸು ನಿಮ್ಮದಾಗುತ್ತದೆ ಎಂದವರು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ, ನೂತನ ರಂಗಸ್ಥಳವನ್ನು ಉದ್ಘಾಟಿಸಿ ಮಾತನಾಡಿದರು. “ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಮೌಲ್ಯಯುತ ಶಿಕ್ಷಣ ಒದಗಿಸುವುದು, ನಮ್ಮ ಕಾಲೇಜಿನ ಅಧ್ಯಕ್ಷರ ಮೂಲ ಆಶಯವಾಗಿದೆ. ಇಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿ ಗಳು ರಾಷ್ಟ್ರ ಮಟ್ಟದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ನಮ್ಮ ಕಾಲೇಜಿನಲ್ಲಿ ಶಿಕ್ಷಣದ ಜೊತೆಗೆ ಬೇರೆ ಬೇರೆ  ಚಟುವಟಿಕೆಗಳಿವೆ. ಅದರಲ್ಲಿ ಒದಗಿ ಬರುವ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು” ಎಂದರು.

ಎಲ್ಲಾ ಸವಲತ್ತು ಹಾಗೂ ಅವಕಾಶಗಳನ್ನು ಉಪಯೋಗಿಸಿಕೊಂಡರೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಾಗುತ್ತದೆ. ನಮ್ಮ ಆಸಕ್ತಿ ವಿಚಾರಗಳನ್ನು ನಾವು ಗುರುತಿಸಿಕೊಂಡು, ಶಿಕ್ಷಣದ ಜೊತೆಗೆ ನಮ್ಮ ಆಸಕ್ತಿ ವಿಷಯದಲ್ಲಿ ಮುಂದುವರೆದು ಪರಿಶ್ರಮ ಶ್ರದ್ಧೆಯ ಜೊತೆಗೆ ಆತ್ಮವಿಶ್ವಾಸವನ್ನು ಬೆಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಖಾವಂದರ ಕುರಿತ ಸಾಧನೆ ಹಾಗೂ ಅವರ ಚಿಂತನೆಗಳನ್ನು ಒಳಗೊಂಡಂತಹ ಕಾರ್ಯಕ್ರಮವನ್ನು “ಯಕ್ಷ ದರ್ಶನ” ಎಂಬ ಶೀರ್ಷಿಕೆ ಅಡಿಯಲ್ಲಿ ಹಾಗೂ ಯಕ್ಷಗಾನದ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಲಾಯಿತು.

ಕಾಲೇಜಿನ ವತಿಯಿಂದ ಯಕ್ಷಗಾನ ವಿದ್ಯಾರ್ಥಿಗಳಿಗೆ ಅಧ್ಯಯನ ಪ್ರವಾಸವನ್ನು ವೆಂಕಪ್ಪಯ್ಯ ಸಾಂಸ್ಕೃತಿಕ ಯಕ್ಷಗಾನ ಅಧ್ಯಯನ ಭವನ ಸಿರಿಬಾಗಿಲು ಇಲ್ಲಿಗೆ ಭೇಟಿ ನೀಡಿದ ಅನುಭವಗಳನ್ನು ವಿದ್ಯಾರ್ಥಿಗಳು ಅಮೋಘ ಶಂಕರ್ ಹಾಗೂ ಅನನ್ಯ ಹಂಚಿಕೊಂಡರು.

ವಿದ್ಯಾರ್ಥಿಗಳಿಬ್ಬರು “ಬಾಲ ಗೋಪಾಲ” ಪ್ರಸ್ತುತಿಯನ್ನು ಆಡಿ ತೋರಿಸಿದರು.

ಪ್ರಸ್ತುತ ತಿಂಗಳು  ಅತೀ ಹೆಚ್ಚು ಯಕ್ಷಗಾನ ತರಗತಿಗೆ ಹಾಜರಾದ ವಿದ್ಯಾರ್ಥಿಗಳಾದ ಸ್ಮೃತಿ ಹಾಗೂ ಅನನ್ಯ ರನ್ನು ಗುರುತಿಸಲಾಯಿತು.

ಸಾಂಸ್ಕೃತಿಕ ವಿಭಾಗದ  ಮುಖ್ಯಸ್ಥರಾದ ಡಾ. ನಾಗಣ್ಣ, ಯಕ್ಷಗಾನ ತರಬೇತುದಾರ ಅರುಣ್ ಕುಮಾರ್ ಧರ್ಮಸ್ಥಳ, ರಂಗ ನಿರ್ದೇಶಕ ಯಶವಂತ್ ಬೆಳ್ತಂಗಡಿ, ಕಾಲೇಜಿನ ಸಂಸ್ಕೃತ ವಿಭಾಗದ ಪ್ರಾಧ್ಯಾಪಕ ಶ್ರೇಯಸ್ ಪಾಳ್ಯಂದೆ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಸಚಿನ್ ಉಪಸ್ಥಿತರಿದ್ದರು. ಯಕ್ಷಗಾನದ ವಿದ್ಯಾರ್ಥಿಗಳು  ಹಾಗೂ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಯಕ್ಷಗಾನ ವಿದ್ಯಾರ್ಥಿಗಳು ಪ್ರಾರ್ಥಿಸಿ, ತೇಜಸ್ ಸ್ವಾಗತಿಸಿ, ಸಹನಾ ವಂದಿಸಿದರು.ಕಾರ್ಯಕ್ರಮವನ್ನು ಪವಿತ್ರ ನಿರೂಪಿಸಿದರು.

Related posts

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya

ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya
error: Content is protected !!