ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024 – 25 ಸಾಲಿನ ವಾರ್ಷಿಕ ಮಹಾಸಭೆಯಲ್ಲಿ “ಬೆಳ್ತಂಗಡಿ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಉತ್ತಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಆದರ್ಶ್ ಜೈನ್ ಮರೋಡಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ಪ್ರವೀಣ್ ಗಿಲ್ಬರ್ಟ್ ಪಿಂಟೋ ರವರು , ಹಾಗೂ ಇತರರರು ಉಪಸ್ಥಿತರಿದ್ದರು.











