ಬಾರ್ಯ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಶೇ. 100 ಸಾಧನೆ ಮಾಡಿದ್ದು ಇವರಿಗೆ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು .
ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಬಾರ್ಯ ಸಿಎ ಬ್ಯಾಂಕ್ ಅಧ್ಯಕ್ಷ ಪ್ರವೀಣ್ ರೈ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಬಾರ್ಯ ಸಿಎ ಬ್ಯಾಂಕ್ ನಿರ್ದೇಶಕರು, ಇತರರು ಉಪಸ್ಥಿತರಿದ್ದರು.











