ನಿಡ್ಲೆ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ನಿಡ್ಲೆ ಸಿಎ ಬ್ಯಾಂಕ್ ಅಧ್ಯಕ್ಷ ಧನಂಜಯ ಗೌಡ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪದ್ಮನಾಭ ಗೌಡ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಡೀಕಯ್ಯ ಎಂ. ಕೆ, ನಿರ್ದೇಶಕರುಗಳಾದ ವಿಜಯಲಕ್ಷ್ಮೀ, ಆನಂದ ಗೌಡ, ಧನಂಜಯ ಬಿ, ರಾಜು, ವಿಜಯ ಕುಮಾರ್ ಹೆಚ್ ಹಾಗೂ ಇತರರು ಉಪಸ್ಥಿತರಿದ್ದರು.











