ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಿಂದ ನಡೆಸುತ್ತಿರುವ ಮಹಿಳಾ ಸಬಲೀಕರಣ ಯೋಜನೆಯ ಜಿಲ್ಲಾ ಒಕ್ಕೂಟಗಳ ಮಹಿಳಾ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿಯನ್ನು ಸಾನ್ ಟವರ್ ಬೆಳ್ತಂಗಡಿ ಇಲ್ಲಿ ಆ.30 ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನೇಹಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಎಲಿಯಮ್ಮ ತೋಮಸ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಜೇಮ್ಸ್, ತರಬೇತುದಾರರು, ರುಡ್ ಸೆಟ್ ಸಂಸ್ಥೆ, ಉಜಿರೆ ಇವರು ಒಕ್ಕೂಟಗಳ ಸದಸ್ಯರು ನಾಯಕತ್ವ ವಹಿಸಿ ಸಂಘಟನೆಗಳನ್ನು ಬಲಪಡಿಸಿ ಉತ್ತಮ ರೀತಿಯಲ್ಲಿ ಮುನ್ನಡೆಸುವ ಬಗ್ಗೆ ತರಬೇತಿ ನೀಡಿದರು.

ಡಿ.ಕೆ.ಆರ್.ಢಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾನಿನಿ ಮಹಿಳಾ ರಾಜ್ಯ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಂಜುಳಾ ಜೋನ್ ಉಪಸ್ಥಿತರಿದ್ದರು. ಕಿರಣ್ ಮಹಿಳಾ ತಾಲೂಕು ಒಕ್ಕೂಟದ ಉಪಾಧ್ಯಕ್ಷರಾದ ಶ್ರೀಮತಿ ವಲ್ಸಮ್ಮ ಎ.ಜೆ ಎಲ್ಲರನ್ನು ಸ್ವಾಗತಿಸಿದರು. ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ಉಷಾ ವಂದಿಸಿದರು. ಸ್ನೇಹ ಜ್ಯೋತಿ ಒಕ್ಕೂಟದ ಸದಸ್ಯೆ ಶ್ರೀಮತಿ ವೈಶಾಲಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಒಕ್ಕೂಟದ ಸದಸ್ಯರು ಹಾಗೂ ಮಹಾ ಸಂಘಗಳ ಪದಾಧಿಕಾರಿಗಳು ಭಾಗವಹಿಸಿದ್ದರು.











