ಮಚ್ಚಿನ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಮಚ್ಚಿನ ಸಿಎ ಬ್ಯಾಂಕ್ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಯಕ್ಷಣ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರು, ಇತರರು ಉಪಸ್ಥಿತರಿದ್ದರು.











