ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಕುಮಾರ್ ಆರಿಗ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರು ಉಪಸ್ಥಿತರಿದ್ದರು.











