23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಅವಹೇಳನಕಾರಿ, ಆಧಾರ ರಹಿತ ವಿಡಿಯೋ ಪೋಸ್ಟ್ ಗೆ ಕೋರ್ಟ್ ತಡೆಯಾಜ್ಞೆ – ಡಿಲೀಟ್ ಗೆ ಸೂಚನೆ

ಬೆಳ್ತಂಗಡಿ: ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರು (CCH-16) O.S. ನಂ. 5185/2025 (CNR ನಂ. KABC010185982025) ಪ್ರಕರಣದಲ್ಲಿ, ಮಾನ್ಯ ಸುಪ್ರೀಂ ಕೋರ್ಟ್ SLP(C) ನಂ. 21969/2025 ನಲ್ಲಿ ನೀಡಿದ ನಿರ್ದೇಶನಗಳ ಪ್ರಕಾರ ತಾತ್ಕಾಲಿಕ ಪರಿಹಾರವನ್ನು ಅನುಮತಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಆಧಾರ ರಹಿತ ಆರೋಪಗಳನ್ನು, ಮಾನಹಾನಿ ಹೇಳಿಕೆಗಳನ್ನು ನೀಡುತ್ತಿದ್ದ ಬುರುಡೆ ಗ್ಯಾಂಗ್ ಗೆ ಕೋರ್ಟ್ ಚಾಟಿ ಬೀಸಿದೆ. ಯೂಟ್ಯೂಬ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಲಾಗಿದ್ದ ಆಧಾರ ರಹಿತ ವಿಡಿಯೋ ಮತ್ತು ಪೋಸ್ಟ್ ಗಳಿಗೆ ಕೋರ್ಟ್ ತಡೆಯಾಜ್ಞೆ ನೀಡಿದ್ದು, ತಕ್ಷಣವೇ ಇವುಗಳನ್ನು ಡಿಲೀಟ್ ಮಾಡುವಂತೆ ಸೂಚಿಸಿದೆ.

ಚಿನ್ನಯ್ಯನ ದೂರಿನ ಆಧಾರದಲ್ಲಿ ಧರ್ಮಸ್ಥಳ ಪೊಲೀಸರು ದಾಖಲಿಸಿದ್ದ ಕ್ರೈಂ ನಂಬರ್ 39/ 2025 ಪ್ರಕರಣಕ್ಕೆ ಸಂಬಂಧಪಟ್ಟಂತೆ ಅನಾವಶ್ಯಕವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬಸ್ಥರನ್ನು ಅವಹೇಳನಕಾರಿಯಾಗಿ ನಿಂದಿಸುತ್ತಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ ಹಾಗೂ ಇತರರ ವಿರುದ್ಧ ಡಿ. ಹರ್ಷೇಂದ್ರ ಕುಮಾರ್ ಅವರು ಮಾನ್ಯ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ದಾವೆಯನ್ನ ಸಲ್ಲಿಸಿದ್ದರು. ಆ ದಾವೆಯಲ್ಲಿ ಮಾನ್ಯ ಸಿಟಿ ಸಿವಿಲ್ ನ್ಯಾಯಾಲಯವು ಪ್ರತಿಬಂಧಕ ಆಜ್ಞೆಯನ್ನು ಮತ್ತು ವಿಡಿಯೋಗಳನ್ನು ಡಿಲೀಟ್ ಮಾಡುವಂತೆ ಆದೇಶವನ್ನು ಮಾಡಿತ್ತು. ಇದನ್ನು ಪ್ರಶ್ನಿಸಿ ಥರ್ಡ್ ಐ ಚಾನೆಲ್ ನವರು ನೇರವಾಗಿ ಸರ್ವೋಚ್ಚ ನ್ಯಾಯಾಲಯದಲ್ಲಿ ಸ್ಪೆಷಲ್‌ ಲೀವ್‌ ಪೆಟೀಷನ್‌ ಅನ್ನು ದಾಖಲಿಸಿತ್ತು, ಸರ್ವೋಚ್ಚ ನ್ಯಾಯಾಲಯವು ಹೈಕೋರ್ಟಿಗೆ ಅರ್ಜಿ ಸಲ್ಲಿಸುವಂತೆ ಮೌಖಿಕವಾಗಿ ತಿಳಿಸಿತ್ತು. ನಂತರದ ದಿನಗಳಲ್ಲಿ ಕುಡ್ಲಾ rampage ಚಾನಲ್ ನ ಅಜಯ್ ಅಂಚನ್ ಅವರು ಹೈಕೋರ್ಟಿನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಹೈಕೋರ್ಟಿನ ಏಕ ಸದಸ್ಯ ಪೀಠವು ಸಿಟಿ ಸಿವಿಲ್ ಕೋರ್ಟ್ ನೀಡಿದ್ದ ಆದೇಶವನ್ನು ವಜಾಗೊಳಿಸಿ, ಮರು ತನಿಖೆಯನ್ನು ನಡೆಸಿ ಆದೇಶವನ್ನು ಹೊರಡಿಸುವಂತೆ ಸೂಚಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಇವರು ಸರ್ವೋಚ್ಚ ನ್ಯಾಯಾಲಯದಲ್ಲಿ ದಾವೆಯನ್ನು ಸಲ್ಲಿಸಿ, ಸರ್ವೋಚ್ಚ ನ್ಯಾಯಾಲಯವು ಹೈಕೋರ್ಟಿನ ಆದೇಶವನ್ನು ಪರಿಗಣನೆಗೆ ತೆಗೆದುಕೊಳ್ಳದೆ ದಾವೆಯ ಜೊತೆ ಸಲ್ಲಿಸಲಾದ ವಿಡಿಯೋಗಳು ದಾಖಲೆಗಳು ಹಾಗೂ ಪ್ರಕರಣವನ್ನು ಪರಿಗಣಿಸಿ ಎರಡು ವಾರಗಳಲ್ಲಿ ತೀರ್ಪು ನೀಡುವಂತೆ ಆದೇಶಿಸಿತ್ತು.

ಮುಂದಿನ ದಿನಗಳಲ್ಲಿ ಹರ್ಷೇಂದ್ರ ಕುಮಾರ್ ಅವರು ಸಲ್ಲಿಸಿದ್ದ ದಾಖಲೆಗಳು, ವಿಡಿಯೋಗಳು ಹಾಗೂ ಅವರ ಅರ್ಜಿಯನ್ನು ಪರಿಗಣಿಸಿ, ಐದು ದಿನಗಳ ಕಾಲ ವಾದ ವಿವಾದಗಳನ್ನು ಆಲಿಸಿ, ವೀಡಿಯೋಗಳನ್ನು ವಾಟ್ಸ್ ಆ್ಯಪ್, ಇನ್ಸ್ಟಾಗ್ರಾಮ್, ಫೇಸ್ಬುಕ್ ಮತ್ತಿತರ ಸೋಶಿಯಲ್ ಮೀಡಿಯಾ ಗಳಲ್ಲಿ ಹರಿಯ ಬಿಟ್ಟಿದ್ದ ಮೆಸೇಜ್ ಗಳು, ವೀಡಿಯೊಗಳು ಮತ್ತು ರೀಲ್ ಗಳನ್ನು ನ್ಯಾಯಾಲಯದಲ್ಲಿ ವೀಕ್ಷಿಸಿ, ಎರಡು ಕಡೆಯ ವಾದ ವಿವಾದಗಳನ್ನು ಸಂಪೂರ್ಣವಾಗಿ ಆಲಿಸಿ ಮತ್ತೆ ನ್ಯಾಯಾಲಯವು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಮತ್ತು ಜಯಂತ್ ಟಿ ಮತ್ತಿತರರ ವಿರುದ್ಧ ಪ್ರತಿಬಂಧಕಾಜ್ಞೆಯನ್ನು ನೀಡಿದೆ. ಮಾತ್ರವಲ್ಲದೆ, ಅವಹೇಳನಕಾರಿಯಾಗಿ ನಿಂದನಾತ್ಮಕವಾಗಿ ಮಾತನಾಡಿದ್ದ ವಿಡಿಯೋಗಳನ್ನು ತಕ್ಷಣ ಡಿಲೀಟ್ ಮಾಡುವಂತೆ ಆದೇಶಿಸಿದೆ. ಈ ಪ್ರಕರಣದಲ್ಲಿ ಪ್ರತಿವಾದಿಗಳು ಮಾತ್ರವಲ್ಲದೆ ಇತರರಿಗೂ ಕೂಡ ಈ ಆದೇಶವು ಒಂದು ಸಂದೇಶ ಕೊಟ್ಟಿದ್ದು ಯಾವುದೇ ರೀತಿಯ ಸಕಾರಣಗಳಿಲ್ಲದೆ, ದಾಖಲೆಗಳಿಲ್ಲದೆ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಹಾಗೂ ಕುಟುಂಬಸ್ಥರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವವರಿಗೆ ಆದೇಶದ ಮೂಲಕ ಖಡಕ್‌ ಎಚ್ಚರಿಕೆ ನೀಡಿದೆ.

ಡಿ ಹರ್ಷೇಂದ್ರ ಕುಮಾರ್‌ ಪರ ಹೈಕೋರ್ಟ್‌ ನ ನ್ಯಾಯವಾದಿ ಎಸ್‌. ರಾಜಶೇಖರ್‌ ಹಿಲಿಯಾರು ವಾದ ಮಂಡಿಸಿದ್ದರು.

Related posts

ಮಡಂತ್ಯಾರು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಬಳಂಜ ಶಾಲೆಗೆ ಡೆಸ್ಕ್ ಮತ್ತು ಬೆಂಚ್ ಹಸ್ತಾಂತರ

Suddi Udaya

ಬಂದಾರು : ಪಿಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ: ಆ.8 ರಂದು ವಿದ್ಯುತ್ ನಿಲುಗಡೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya
error: Content is protected !!