March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಶಾಲೆಯಲ್ಲಿ “ಕಲರ‍್ಸ್ ಡೇ”

ಉಜಿರೆ: ಅನುಗ್ರಹ ಶಾಲೆಯಲ್ಲಿ ಪ್ರೀ ಕೆ.ಜಿ, ಎಲ್.ಕೆ.ಜಿ, ಯು.ಕೆ.ಜಿ ಹಾಗೂ ಒಂದನೇ ತರಗತಿಯ ಪುಟಾಣಿಗಳಿಗೆ ‘ಕಲರ‍್ಸ್ ಡೇ( ಬಣ್ಣಗಳ ದಿನ) ಯನ್ನು ವಿನೂತನ ರೀತಿಯಲ್ಲಿ ವೈಭವದಿಂದ ಆಚರಿಸಲಾಯಿತು. ಶಾಲೆಯ ಹೆಮ್ಮೆಯ ಬ್ಯಾಂಡ್ ವಾದನದೊಂದಿಗೆ ಪುಟಾಣಿಗಳನ್ನು ಅವರ ಹೆತ್ತವರೊಂದಿಗೆ ಅನುಗ್ರಹ ಶಾಲಾ ಮಹಾದ್ವಾರದಿಂದ ಸಭಾಭವನಕ್ಕೆ ಶಿಸ್ತಿನಿಂದ ಕರೆತರಲಾಯಿತು.

ಪುಟಾಣಿ ವಿದ್ಯಾರ್ಥಿಗಳು ಸ್ವಾಗತಿಸಿದರು. ವಿಭಿನ್ನ ಶೈಲಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾದ ಡಾ. ಮರೀನಾ ಬ್ಯಾಪ್ಟಿಸ್ಟ್ ಇವರು ತಮ್ಮ ಭಾಷಣದಲ್ಲಿ ಬಣ್ಣಗಳ ಮಹತ್ವವನ್ನು ತಿಳಿಸಿ, ಮಕ್ಕಳನ್ನು ಪ್ರೀತಿಯಿಂದ ಬೆಳೆಸಬೇಕು ಎಂದು ತಿಳಿಸಿದರು. ನಂತರ ಶಾಲಾ ಸಂಚಾಲಕರಾದ ವಂದನೀಯ ಫಾ| ಅಬೆಲ್ ಲೋಬೊ ಅವರು ಕಲರ‍್ಸ್ ಡೇ ಯ ಮಹತ್ವವನ್ನು ತಿಳಿಸುತ್ತಾ ಮಕ್ಕಳ ಪ್ರಯತ್ನ ಸಂತಸ ವ್ಯಕ್ತಪಡಿಸಿ, ಶುಭ ಹಾರೈಸಿದರು.

ವೇದಿಕೆಯಲ್ಲಿ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ! ವಿಜಯ್ ಲೋಬೊ, ಪಾಲನಾ ಮಂಡಳಿಯ ಉಪಾಧ್ಯಕ್ಷ ಶ್ರೀ ಅಂಟನಿ ಫೆರ್ನಾಂಡೀಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಗುರುರಾಜ್ ಶಬರಾಯ ಹಾಗೂ ಶಿಕ್ಷಕಿಯಾದ ಶ್ರೀಮತಿ ಗ್ರೇಸಿ ಸಲ್ಡಾನ್ಹಾ ಉಪಸ್ಥಿತರಿದ್ದರು. ವಿದ್ಯಾರ್ಥಿ ರಾಹುಲ್ ಪ್ರಭು ಕಾರ್ಯಕ್ರಮ ನಿರೂಪಿಸಿದರು.
ತದನಂತರ ಪುಟಾಣಿ ಮಕ್ಕಳಿಂದ ನಡೆದ ವೈವಿಧ್ಯಮಯ ಬಣ್ಣಗಳ ವಸ್ತಾçಲಂಕಾರದಿAದ ಕೂಡಿದ ನೃತ್ಯವು ಎಲ್ಲರ ಮನರಂಜಿಸಿತು.

Related posts

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ನಡ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಫೆ.27-29: ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!