March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”

ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2024-25ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2024-25” ಪ್ರಶಸ್ತಿಯನ್ನು ಆ.30 ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25 ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್. ಕೋಟ್ಯಾನ್, ಟಿ.ಜಿ. ರಾಜಾರಾಮ ಭಟ್, ಎಂ. ವಾದಿರಾಜ್ ಶೆಟ್ಟಿ, ಶಶಿಕುಮಾರ್ ರೈ ಬಿ., ಎಸ್.ಬಿ ಜಯರಾಮ ರೈ, ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ, ಎಂ. ಮಹೇಶ್ ಹೆಗ್ಡೆ, ಬಿ. ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್ ಬಿ. ರೈ, ಕುಶಾಲಪ್ಪ ಗೌಡ ಪಿ., ಎಸ್. ಎನ್. ಮನ್ಮಥ, ಅಪೆಕ್ಸ್ ಬ್ಯಾಂಕ್ ನ ಪ್ರತಿನಿಧಿಯಾದ ಸದಾಶಿವ ಉಳ್ಳಾಲ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ರಾವ್, ದ.ಕ ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್.ಎನ್, ರಮೇಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಪ್ರ ) ಗೋಪಾಲಕೃಷ್ಣ ಭಟ್ ಕೆ., ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ನಿರ್ದೇಶಕರುಗಳಾದ ಪರಮೇಶ್ವರ ಜಿ. ಪೂಜಾರಿ, ಆನಂದ ಎಸ್. ಕೊಂಡಾಣ ಮತ್ತಿತ್ತರರು ಉಪಸ್ಥಿತರಿದ್ದರು

Related posts

ಜೆ ಇ ಇ ಮೈನ್ಸ್ ಪರೀಕ್ಷೆ: ವಾಣಿ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಗೆ ಶೇ. 98.08 ಫಲಿತಾಂಶ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya
error: Content is protected !!