September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಜಯಂತಿ ಎಂ.ಕೆ. ರವರ ಅಧ್ಯಕ್ಷತೆಯಲ್ಲಿ ಸೆ.1ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಪಿ.ಎಂ. ಪೋಷಕ್ ನಿರ್ದೇಶಕ ರಾಜೇಂದ್ರ ಕೃಷ್ಣ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು. ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಸದಸ್ಯರಾದ ಆಶಾ ಬೆನಡಿಕ್ಟ ಸಲ್ದಾನ, ಗಣೇಶ್ ಆರ್., ಹರಿಕೃಷ್ಣ, ದಿನೇಶ್ ಶೆಟ್ಟಿ, ಪ್ರಸಾದ್ ಶೆಟ್ಟಿ, ರಜನಿ ಎಂ.ಆರ್., ಸವಿತಾ ಶೆಟ್ಟಿ, ಚಿದಾನಂದ ಶೆಟ್ಟಿ, ಆಶಾಲತಾ, ಮೆರಿಯಮ್ಮ, ಮೋಹನದಾಸ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿಪಿ ಸ್ವಾಗತಿಸಿದರು. ಸಿಬ್ಬಂದಿ ಮೋಹನ್ ಅನುಪಾಲನ ವರದಿ ವಾಚಿಸಿದರು. ಲೆಕ್ಕ ಸಹಾಯಕಿ ಸುಪ್ರಿತಾ ಜಮಾ ಖರ್ಚು ವಿವರ ಮಂಡಿಸಿದರು. ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಘಟನೆ ಖಂಡಿಸಿ ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ ನಡೆಸಿದಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬಜಿರೆ ಪಿಯಂಶ್ರೀ ಶಾಲೆಯ ಎಲ್‌ಕೆಜಿ-ಯುಕೆಜಿ ಪೋಷಕರ ಸಭೆ: ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ, ಉಪಾಧ್ಯಕ್ಷೆಯಾಗಿ ಹರಿಣಿ ಜೈನ್ ಆಯ್ಕೆ

Suddi Udaya

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!