September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ; ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಬೃಹತ್ ಸಮಾವೇಶ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಬೃಹತ್ ಸಮಾವೇಶ ಧರ್ಮಸ್ಥಳದಲ್ಲಿ ಸೆ. 1 ರಂದು ನಡೆಯಿತು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪೂಜ್ಯ ಖಾವಂದರೆ, ನಿಮಗೆ ಅಣ್ಣಪ್ಪ, ಮಂಜುನಾಥನ ಆಶೀರ್ವಾದವಿದೆ. ಹಿಂದೂ ಸಮಾಜ ಹಾಗೂ ಮೋದಿ ನೇತೃತ್ವದ ಸರಕಾರ ನಿಮ್ಮ ಜೊತೆ ಇದೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜೇಯೇಂದ್ರ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಬಿಜೆಪಿ ರಾಜ್ಯ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಅಶ್ವಥ್ ಕುಮಾರ್, ವಿಪಕ್ಷ ನಾಯಕ ಆರ್ ಅಶೋಕ್, ಮಾಜಿ ಸಚಿವ ಶ್ರೀರಾಮುಲು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ, ಕ್ಯಾ. ಬ್ರಿಜೇಶ್ ಚೌಟ, ತೇಜಸ್ವಿ ಸೂರ್ಯ, ರಾಷ್ಟ್ರೀಯ ಮಾಜಿ ಕಾರ್ಯದರ್ಶಿ ಸಿಟಿ ರವಿ, ಮಾಜಿ ಸ್ಪೀಕರ್ ವಿಶ್ವೇರಯ್ಯ ಕಾಗೇರಿ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಬೆಂಗಳೂರು ರಾಜರಾಜೇಶ್ಚರಿ ಶಾಸಕ ಮುನಿರತ್ನ ,ಮಾಜಿ ಸಚಿವ ಬಿಸಿ ಪಾಟೀಲ್, ಮಂಗಳೂರು ಶಾಸಕ ಭರತ್ ಶೆಟ್ಟಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಬೊಟ್ಯಾಡಿ, ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ವಿಪಕ್ಷ ನಾಯಕ ಚಲವಾದಿ ನಾರಾಯಣ ಸ್ವಾಮಿ, ಯಲಹಂಕ ಶಾಸಕ ವಿಶ್ಚನಾಥ, ಶಾಸಕ ಧೀರಜ್ ಗುಂಡುರಾವ್, ತುಮಕೂರು ಶಾಸಕ ಸುರೇಶ್, ಸಕಲೇಶಪುರ ಶಾಸಕ ಸಿಮೇಂಟ್ ಮಂಜು, ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ವಿಧಾನ ಸಭೆಯ ಮುಖ್ಯ‌ಸಚೇತಕ ದೊಡ್ಡಣ್ಣೆ ಗೌಡ, ಕುಮಟ ಶಾಸಕ ದಿನಕರ ಶೆಟ್ಟಿ, ವಿಧಾನ ಪರಿಷತ್ ಮುಖ್ಯ ಸಚೇತಕ ರವಿಕುಮಾರ್, ಶಾಸಕ ವೇದವ್ಯಾಸ್ ಕಾಮತ್, ಸುಧಾಕರ ರೆಡ್ಡಿ, ಸಂಸದ ಡಾ.ಮಂಜುನಾಥ್, ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್, ಗಣೇಶ್ ಕಾರ್ಣಿಕ್ ಹಾಗೂ ರಾಜ್ಯದ ಶಾಸಕರು, ವಿಧಾನ ಪರಿಷತ್ ಶಾಸಕರುಗಳು, ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.

ಶಾಸಕ ಹರೀಶ್ ಪೂಂಜ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಸಾವಿರ ಸಾವಿರ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸಮಾವೇಶದಲ್ಲಿ ಕೇಸರಿ ಶಾಲು ಹಾಕಿ ಭಾಗಿಯಾದರು.

Related posts

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

Suddi Udaya

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya
error: Content is protected !!