25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ: ಸಂತ ಅಂತೋನಿ ಕಾಲೇಜಿನಲ್ಲಿ ‘ಫೋಕ್ಸೋ ಕಾಯ್ದೆ ಮತ್ತು ವ್ಯಸನಮುಕ್ತ ಕಾಲೇಜು’ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

ನಾರಾವಿ: ಮಕ್ಕಳ ಸುರಕ್ಷತೆ, ಗೌರವ ಮತ್ತು ಹಕ್ಕುಗಳನ್ನು ಕಾಪಾಡುವ ಉದ್ದೇಶದಿಂದ ಭಾರತ ಸರಕಾರವು 2012ರಲ್ಲಿ ಜಾರಿಗೊಳಿಸಿದ್ದ ಮಹತ್ವದ ಕಾನೂನು ’ಪೋಕ್ಸೋ ಕಾಯ್ದೆ’ ಹಾಗೂ ಆರೋಗ್ಯಕರ ಮತ್ತು ಸಕಾರಾತ್ಮಕ ಶೈಕ್ಷಣಿಕ ವಾತಾವರಣವನ್ನು ನಿರ್ಮಿಸುವ ಉದ್ದೇಶಕ್ಕಾಗಿ ’ವ್ಯಸನ ಮುಕ್ತ ಕಾಲೇಜು’ ಎಂಬ ವಿಷಯಗಳ ಬಗ್ಗೆ ಸಂತ ಅಂತೋನಿ ಕಾಲೇಜು ನಾರಾವಿ ಇಲ್ಲಿ ಮಾಹಿತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ವಿದ್ಯಾರ್ಥಿಗಳಿಗೆ ಸದ್ಭಾವನೆ ಪ್ರತಿಜ್ಞೆಯನ್ನು ಬೋಧಿಸಿದ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ ತಮ್ಮ ಪ್ರಾಸ್ತಾವಿಕ ಮಾತುಗಳನ್ನಾಡಿ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ ಎ. ಅವರು ಪೋಕ್ಸೋ ಕಾಯ್ದೆಯ ಬಗ್ಗೆ ವಿದ್ಯಾರ್ಥಿಗಳಿಗೆ ಸವಿವರವಾಗಿ ಮಾಹಿತಿಯನ್ನು ನೀಡಿದರು. ’ವ್ಯಸನ ಮುಕ್ತ ಕಾಲೇಜು’ ಎಂಬ ವಿಚಾರದ ಬಗ್ಗೆ ಮಾತನಾಡಿದ ಬೆಂಗಳೂರಿನ ವಕೀಲರಾದ ಶ್ರೀಮತಿ ರಶ್ಮಿತಾ ಎನ್ ಇವರು ’ವ್ಯಸನ ಮುಕ್ತ ಸಮಾಜ ನಿರ್ಮಾಣವಾಗಲು ವಿದ್ಯಾರ್ಥಿಗಳು ಪಣತೊಡಬೇಕು ಎಂದರು.

ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ಸುಚೇತ ಸ್ವಾಗತಿಸಿದರು. ಪದವಿ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ತಮೀಮಾ ಧನ್ಯವಾದವಿತ್ತರು. ವಿದ್ಯಾರ್ಥಿನಿ ರಿಸಾನಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಆ.27 ರಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೃಹತ್ ಪಾದಯಾತ್ರೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹ: ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ರಿಗೆ ದೂರು

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya

ಬಳಂಜ.ಬದಿನಡೆ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!