23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ: ವರ್ತಕರ ಸಂಘದ ನೂತನ ಅಧ್ಯಕ್ಷ ಪ್ರಸಾದ್ ಬಿಎಸ್ ಮತ್ತು ತಂಡದ ಪದಪ್ರದಾನ ಹಾಗೂ ಕುಟುಂಬ ಮಿಲನ ಕಾರ್ಯಕ್ರಮ

ಉಜಿರೆ: ಕಳೆದ ಹಲವು ವರ್ಷಗಳಿಂದ ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನೂತನ ಅಧ್ಯಕ್ಷ ಪ್ರಸಾದ್ ಬಿಎಸ್ ಮತ್ತು ತಂಡದ ಪದ ಪ್ರದಾನ ಕಾರ್ಯಕ್ರಮ ಹಾಗೂ ಉಜಿರೆ ವರ್ತಕರ ಸಂಘದ ಕುಟುಂಬ ಮಿಲನ ಕಾರ್ಯಕ್ರಮ ಉಜಿರೆ ಕೃಷ್ಣಾನುಗ್ರಹ ಸಭಾಭವನದಲ್ಲಿ ಆ.31 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ವಹಿಸಿ ಮಾತನಾಡಿ ಕಳೆದ ನಾಲ್ಕು ವರ್ಷ ಅದ್ಬುತವಾಗಿ ಸಂಘವನ್ನು ಮುನ್ನಡೆಸಿದ ತೃಪ್ತಿಯಿದೆ.ಮುಂದೆಯೂ ನನ್ನ ಸಂಪೂರ್ಣ ಸಹಕಾರವಿದೆ ಎಂದರು.

ಮುಂದಿನ ಸಾಲಿನ ನೂತನ ಅಧ್ಯಕ್ಷ ಪ್ರಸಾದ್ ಬಿ. ಎಸ್, ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್, ಕೋಶಾಧಿಕಾರಿ ವಿಶ್ವನಾಥ ಭಂಡಾರಿ ಮತ್ತು ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.

ವರ್ತಕರ ಸಂಘದ ಗೌರವಾಧ್ಯಕ್ಷರು, ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತಸರಾದ ಶರತ್ ಕೃಷ್ಣ ಪಡುವೆಟ್ನಾಯ,ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಅವರು ವರ್ತಕರ ಸಂಘದ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿದರು.

ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಬೆಳ್ತಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ರೋನಾಲ್ಡ್ ಲೋಬೊ,ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್‌, ಮಡಂತ್ಯಾರು ವಾಣಿಜ್ಯ ಮತ್ತು ಕೈಗಾರಿಕಾ ಸೇವಾ ಉದ್ದಿಮೆದಾರರ ಸಂಘದ ಉಪಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಉಜಿರೆ ಬೆಡ್ ಮಾರ್ಟ್ ಯು.ಎ. ಹಮೀದ್, ಮಂಜುಶ್ರೀ ಫ್ಯಾನ್ಸಿ ಕೇವಲ್ ರಾಮ್, ಉಜಿರೆ ವಿಘ್ನೇಶ್ ಬ್ಯಾಟರಿ ಮಾಲಕ ತುಂಗಪ್ಪ ಕೋಟ್ಯಾನ್ ಉಪಸ್ಥಿತರಿದ್ದರು.

ಗೌರವಾರ್ಪಣೆ:ಮನೆ ಮನೆಗೆ ತೆರಳಿ ಚಿಕಿತ್ಸೆ ನೀಡುತ್ತಿರುವ ಎಸ್ ಎ ಮೆಡಿಕಲ್ ನ ಪ್ರಕಾಶ್ ಫೆರ್ನಾಂಡಿಸ್‌, ನಿಕಟಪೂರ್ವ ಅಧ್ಯಕ್ಷ ಅರವಿಂದ ಕಾರಂತ್, ನಿಕಟಪೂರ್ವ ಕಾರ್ಯದರ್ಶಿ ಲಕ್ಷ್ಮಣ ಗೌಡ ಅವರನ್ನು ಗೌರವಿಸಲಾಯಿತು.

ತುಳುನಾಡ ಶೈಲಿಯ ಉಟೋಪಾಚಾರ: ಬೆಳಿಗ್ಗೆಯಿಂದ ಮಕ್ಕಳಿಗೆ,ಮಹಿಳೆಯರಿಗೆ, ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು, ಫನ್ನಿ ಗೇಮ್ಸ್ ನಡೆಯಿತು. ಮಧ್ಯಾಹ್ನ ತುಳುನಾಡ ಸಾಂಪ್ರದಾಯಿಕ ಶೈಲಿಯ ಊಟೋಪಚಾರಗಳು ಎಲ್ಲರ ಗಮನ ಸೆಳೆಯಿತು.

ನೂತನ ಕಾರ್ಯದರ್ಶಿ ಅಬೂಬಕ್ಕರ್ ಸ್ವಾಗತಿಸಿದರು. ಯುವ ಸಾಹಿತಿ ಚಂದ್ರಹಾಸ ಬಳಂಜ, ಕನ್ನಿಕಾ ನಿರೂಪಿಸಿದರು.

Related posts

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಸೇಲ್, ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!