37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಉಪನ್ಯಾಸಮಾಲೆ-5 ಕಾರ್ಯಕ್ರಮ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು, ನಡ ಇದರ ಸಂಯುಕ್ತ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಉಪನ್ಯಾಸಮಾಲೆ-5 ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ಜರುಗಿತು.

ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಶ್ರೀ ಯದುಪತಿ ಗೌಡ ಇವರು ಸಭಾಧ್ಯಕ್ಷತೆಯನ್ನು ವಹಿಸಿ ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇದರ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಮಾಧವ ಎಂ. ಕೆ. ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಾ ” ವಿನಾಯಕ ಕೃಷ್ಣ ಗೋಕಾಕ್ ರವರು ಕನ್ನಡದ ವಿಸ್ಮಯ ಕವಿ, ಗೋಕಾಕ್ ಚಳುವಳಿಯ ಹರಿಕಾರ, ವಿನಾಯಕ ಕಾವ್ಯ ನಾಮಾಂಕಿತರಾಗಿದ್ದು ಅನ್ಯಾನ್ಯ ಜವಾಬ್ದಾರಿಗಳನ್ನು ನಿರ್ವಹಿಸಿ ಅಪಾರ ಅನುಭವವನ್ನು ಪಡಕೊಂಡರು. ಅವರ ಅಮೂಲ್ಯ ಬರಹಗಳು ಅವರಿಗೆ ಅನೇಕ ಪ್ರಶಸ್ತಿಗಳನ್ನು ಹಾಗೂ ಪುರಸ್ಕಾರಗಳನ್ನು ತಂದುಕೊಟ್ಟಿತು. ಇಂಗ್ಲಿಷ್ ಪ್ರಾಧ್ಯಾಪಕನಾಗಿದ್ದು ಕನ್ನಡ ಸಾರಸ್ವತ ಲೋಕಕ್ಕೆ ಅವರು ನೀಡಿದ ಕೊಡುಗೆ ಸ್ತುತ್ಯರ್ಹವಾಗಿದೆ.” ಎಂದರು.

ಅರ್ಥಶಾಸ್ತ್ರ ಉಪನ್ಯಾಸಕರಾದ ವಸಂತಿ ಪಿ. ಇವರು ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಸ್ವಾಗತಿಸಿ, ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಶಿಲ್ಪಾ ಡಿ ಇವರು ವಂದಿಸಿದರು.ಈ ಸಂದರ್ಭದಲ್ಲಿ ” ಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು”ಎಂಬ ವಿ ಕೃ ಗೋಕಾಕರ ಪ್ರಸಿದ್ಧ ಹಾಡನ್ನು ಪ್ರಸ್ತುತಪಡಿಸಲಾಯಿತು.

Related posts

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

Suddi Udaya

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಚಂದ್ರಕುಮಾರ್ ರವರಿಗೆ ಸೇವಾ ನಿವೃತ್ತಿ

Suddi Udaya

ಪಡಂಗಡಿಯಲ್ಲಿ ರಬ್ಬರ್ ಕೊಟ್ಟಿಗೆಗೆ ಬಿದ್ದ ಬೆಂಕಿ: ಸಾವಿರಾರು ಮೌಲ್ಯದ ರಬ್ಬರ್ ಬೆಂಕಿಗಾಹುತಿ

Suddi Udaya

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

Suddi Udaya
error: Content is protected !!