25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಯುವಬಿಲ್ಲವ ವೇದಿಕೆ ನೇತೃತ್ವದಲ್ಲಿ ಯುವ ಚೈತನ್ಯ 2025 ವ್ಯಕ್ತಿತ್ವ ವಿಕಸನ ಕಾರ್ಯಾಗಾರ

ಬೆಳ್ತಂಗಡಿ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಯುವಬಿಲ್ಲವ ವೇದಿಕೆ ಬೆಳ್ತಂಗಡಿ ನೇತೃತ್ವದಲ್ಲಿ ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿ ಸಹಕಾರದೊಂದಿಗೆ ಯುವ ಚೈತನ್ಯ 2025 ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಕಾರ್ಯಕ್ರಮ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಿತು.

ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಇದರ ಅಧ್ಯಕ್ಷ ರಕ್ಷಿತ್ ಶಿವರಾಮ್ ಕಾರ್ಯಾಗಾರ ಉದ್ಘಾಟಿಸಿದರು. ಕೆ.ಎಸ್.ಎ ತರಬೇತುದಾರ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಡಾ. ನಂದೀಶ್ ವೈ ಡಿ ವ್ಯಕ್ತಿತ್ವ ವಿಕಸನ ತರಬೇತಿ ನೀಡಿದರು.

ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷ ಸುಂದರ ಪೂಜಾರಿ, ಪ್ರಧಾನ ಕಾರ್ಯದರ್ಶಿ ನಿತೀಶ್ ಕೋಟ್ಯಾನ್, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಜೊತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು, ಯುವಬಿಲ್ಲವ ವೇದಿಕೆ ಅಧ್ಯಕ್ಷ ಎಮ್ ಕೆ ಪ್ರಸಾದ್, ಯುವವಾಹಿನಿ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ನಿರ್ದೇಶಕರಾದ ವಿನೋದಿನಿ ರಾಮಪ್ಪ, ನಮಿತ ಪೂಜಾರಿ, ಸಂತೋಷ್ ಕೆ ಸಿ, ಚಂದ್ರಶೇಖರ ಇಂದಬೆಟ್ಟು, ಕಮಲಾಕ್ಷ ಪೂಜಾರಿ ,ಜಯಕುಮಾರ್ ನಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತಾಲೂಕಿನ ಕಾಲೇಜು ವಿದ್ಯಾರ್ಥಿಗಳು , ಪೋಷಕರು ಮತ್ತು ಯುವಬಿಲ್ಲವ ವೇದಿಕೆಯ ಜೊತೆ ಕಾರ್ಯದರ್ಶಿ ಸುರೇಂದ್ರ ಕೋಟ್ಯಾನ್ , ಸುರೇಶ್ ಮೇಲಂತಬೆಟ್ಟು, ಯೋಗೀಶ್ ಗೇರುಕಟ್ಟೆ ಉಪಸ್ಥಿತರಿದ್ದರು. ಎಮ್ ಕೆ ಪ್ರಸಾದ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿ, ನಿತೀಶ್ ಕೋಟ್ಯಾನ್ ಧನ್ಯವಾದವಿತ್ತರು. ಸಮೀಕ್ಷ ಶಿರ್ಲಾಲು ಮತ್ತು ಯುವ ಬಿಲ್ಲವ ವೇದಿಕೆಯ ಸಾಂಸ್ಕೃತಿಕ ಕಾರ್ಯದರ್ಶಿ ಆಕಾಶ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಶಾಸಕ ಹರೀಶ್ ಪೂಂಜ ಇವರಿಗೆ ಮನವಿ

Suddi Udaya

ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಮಹಿಳಾ ಬಂಟರ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ನೇತೃತ್ವ ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಬದನಾಜೆ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
error: Content is protected !!