March 7, 2026
Uncategorized

ಚಿನ್ನಯ್ಯ ಪರ ವಕೀಲರುಗಳ ವಿರುದ್ಧ ಎಸ್.ಐ.ಟಿಗೆ ಧರ್ಮಸ್ಥಳ ಗ್ರಾಮಸ್ಥರಿಂದ ದೂರು:

ಧರ್ಮಸ್ಥಳ ಹಲವಾರು ಮೃತದೇಹ ಹೂತುಹಾಕಿದ ಆರೋಪಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ ಧನಂಜಯ್ ಹಾಗೂ ಅವರ ತಂಡದ ವಿರುದ್ದ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಸೆ.೩ ರಂದು ಸಂಜೆ ಧರ್ಮಸ್ಥಳ ಗ್ರಾಮಸ್ಥರ ಪರವಾಗಿ ರಾಜೇಂದ್ರ ಅಜ್ರಿ ದೂರು ನೀಡಿದ್ದಾರೆ.
ದೂರುದಾರ ಹಾಗೂ ಆರೋಪಿಯಾಗಿರುವ ಚಿನ್ನಯ್ಯ ತನ್ನ ಹೇಳಿಕೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ ಧನಂಜಯ್ ಅವರಿಗೆ ಎಲ್ಲ ದಾಖಲೆಗಳನ್ನು ನೀಡಿರುವುದಾಗಿ ಹೇಳಿಕೆ ನೀಡಿದ್ದಾನೆ, ಈ ಹಿನ್ನಲೆಯಲ್ಲಿ ಕೆ.ವಿ ಧನಂಜಯ್ ಅವರ ಬಳಿ ಇರುವ ದಾಖಲೆಗಳು ಏನು ಎಂಬ ಬಗ್ಗೆ ಪರಿಶೀಲನೆ ನಡೆಸಬೇಕು ಅವರನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿಗಳನ್ನು ಹೊರತರಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
ದೂರಿನಲ್ಲಿ ಕೆ.ವಿ ಧನಂಜಯ ಅವರ ವಿರುದ್ದ ಹಾಗೂ ಅವರೊಂದಿಗಿದ್ದ ನ್ಯಾಯವಾದಿಗಳಾದ ಓಜಸ್ವಿ ಗೌಡ, ಸಚಿನ್ ದೇಶ್ಪಾಂಡೆ, ದಿವಿನ್ ಧೀರಜ್, ಮಂಜುನಾಥ್ ಹಾಗೂ ಇತರರ ವಿರುದ್ದ ದೂರು ನೀಡಲಾಗಿದೆ. ದೂರನ್ನು ಸ್ವೀಕರಿಸಿರುವ ಎಸ್.ಐ.ಟಿ ಈ ಬಗ್ಗೆ ತನಿಖೆ ನಡೆಸುವುದಾಗಿ ಹಿಂಬರಹ ನೀಡಿದ್ದಾರೆ ಎಂದು ದೂರುದಾರ ರಾಜೇಂದ್ರ ಅಜ್ರಿ ಮತ್ತು ಶ್ರೀನಿವಾಸ್ ರಾವ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಧರ್ಮಸ್ಥಳ: ಅಪರಿಚಿತ ಮಹಿಳೆ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ರವರಿಗೆ ಸನ್ಮಾನ

Suddi Udaya
error: Content is protected !!