
ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಮಚ್ಚಿನ ಇಲ್ಲಿ ನಡೆದ ಗುರುವಾಯನಕೆರೆ ಪುಂಜಾಲಕಟ್ಟೆ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಉತ್ತಮ ಹಿಡಿತಗಾರ್ತಿಯಾಗಿ ಸಿಂಚನ ಆಲ್-ರೌಂಡರ್ ಆಗಿ ನಿಹಾನ ಆಯ್ಕೆಯಾಗಿರುತ್ತಾರೆ. ದೈಹಿಕ ಶಿಕ್ಷಣ ಶಿಕ್ಷಕಿ ಪೂರ್ಣಿಮಾ ಬಿ ತರಬೇತಿ ನೀಡಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಹಾಗೂ ಅಧ್ಯಾಪಕ ವೃಂದದವರು ಸಹಕಾರ ನೀಡಿದರು.











