37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಗುರುದೇವ ಕಾಲೇಜು – ಭಿತ್ತಿ ಪತ್ರಿಕೆ ಅನಾವರಣ

ಬೆಳ್ತಂಗಡಿ : ‘ಬದುಕು ಭಾವನೆಗಳ ಅಭಿವ್ಯಕ್ತಿ. ಆ ಭಾವನೆಗಳಿಗೆ ಅಕ್ಷರ ರೂಪ ನೀಡಿದಾಗ ಶ್ರೇಷ್ಠ ಸಾಹಿತ್ಯವಾಗಿ ಮೂಡಿ ಬರಲು ಸಾಧ್ಯವಾಗುವುದು. ಹಾಗಾಗಿ ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜತೆಯಲ್ಲಿಯೇ ಸಾಹಿತ್ಯ ಸಾಂಸ್ಕೃತಿಕ ಅಭಿರುಚಿಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಪ್ರೀತಿತಾ ಧರ್ಮ ವಿಜೇತ್ ಹೇಳಿದರು.

ಅವರು ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ವಿದ್ಯಾರ್ಥಿಗಳು ಸಿದ್ಧಪಡಿಸಿದ ‘ಜ್ಞಾನ ಗಂಗಾ’ ಭಿತ್ತಿ ಪತ್ರಿಕೆ ಅನಾವರಣಗೊಳಿಸಿ ಮಾತನಾಡಿದರು.

‘ಸಾಹಿತ್ಯದ ಓದು ಮತ್ತು ಬರವಣಿಗೆ ಬದುಕಿಗೆ ಸುಂದರ ಸ್ವರೂಪವನ್ನು ನೀಡುವಂತಹುದು. ಕಾಲೇಜು ಜೀವನದಲ್ಲಿ ಭಿತ್ತಿ ಪತ್ರಿಕೆ ಮೂಲಕ ಸಿಗುವ ಬರವಣಿಗೆಯ ಅನೇಕ ಅವಕಾಶಗಳ ಸದ್ಭಳಕೆ ಮಾಡಿಕೊಳ್ಳಬೇಕು. ಸಾಹಿತ್ಯದ ಅಭಿರುಚಿ ಬೆಳೆಸಿಕೊಂಡವರು ಜೀವನದ ಸುಖವನ್ನು ಅನುಭವಿಸಬಲ್ಲರು’ ಎಂದ ಅವರು ಅತ್ಯುತ್ತಮ ಭಿತ್ತಿ ಪತ್ರಿಕೆಗೆ ಉತ್ತಮ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ವೇದಿಕೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ, ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್, ಕಾಲೇಜಿನ ಸಾಹಿತ್ಯ ಸಂಘದ ಸಂಚಾಲಕರಾದ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಅಶ್ವಿನಿ, ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಭಾಗ್ಯಶ್ರೀ ಇದ್ದರು.

ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಬಿ.ಎ. ಶಮೀವುಲ್ಲಾ ಸ್ವಾಗತಿಸಿದರು. ಸಾಹಿತ್ಯ ಸಂಘದ ವಿದ್ಯಾರ್ಥಿ ಪ್ರತಿನಿಧಿಗಳಾದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಕೃತಿ ಕಾರ್ಯಕ್ರಮ ನಿರೂಪಿಸಿ, ದಿಶಾ ವಂದಿಸಿದರು.

Related posts

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya
error: Content is protected !!