ಬೆಳ್ತಂಗಡಿ : ಬುರುಡೆ ಚಿನ್ನಯ್ಯನ 12 ದಿನಗಳ ಎಸ್.ಐ.ಟಿ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಅಧಿಕಾರಿಗಳು ಸೆ.3 ರಂದು 3 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ವ್ಯವಹಾರಿಕ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ವಿಜಯೇಂದ್ರ.ಹೆಚ್.ಟಿ ಮುಂದೆ ಹಾಜರುಪಡಿಸಿದ್ದಾರೆ. ಮತ್ತೆ ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಎಸ್.ಐ.ಟಿ ಅಧಿಕಾರಿಗಳು ಕೇಳುವ ಸಾಧ್ಯತೆ ಇದೆ ಎನ್ನಲಾಗಿದೆ.

ನ್ಯಾಯಾಲಯಕ್ಕೆ ಹಾಜರು ಪಡಿಸುವ ಮುನ್ನ ಎಸ್‌ಐಟಿ ಅಧಿಕಾರಿಗಳು ಸಾಕ್ಷಿದಾರ ಪ್ರಸ್ತುತ ಆರೋಪಿಯಾಗಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಸುಮಾರು ಬೆಳಗ್ಗೆ ೧೧.೪೫ರ ವೇಳೆ ವೈದ್ಯಕೀಯ ಪರೀಕ್ಷೆಗೆ ಹಾಜರುಪಡಿಸಿ ಮರಳಿ ಎಸ್‌ಐಟಿ ಕಚೇರಿಗೆ ಕರೆದೊಯ್ಯದಿದ್ದಾರೆ.











