September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ನಾರಾವಿ ಗ್ರಾಮ ಪಂಚಾಯತಿಗೆ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ

ನಾರಾವಿ :ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮ ಪಂಚಾಯತಿಗೆ ಸೆ. 3ರಂದು ವಿಧಾನ ಪರಿಷತ್ತಿನ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿಯ ಬಗ್ಗೆ ಚರ್ಚಿಸಿ ಪರಿಶೀಲಿಸಿದರು.

ಕೇಂದ್ರ ಸರ್ಕಾರದ MGNREGA, ಪ್ರಧಾನ ಮಂತ್ರಿ ಆವಾಸ್ ಯೋಜನೆ, 15ನೇ ಹಣಕಾಸು ಅನುದಾನ, ಸ್ವಚ್ಛ ಭಾರತ ಮಿಷನ್ (SBM) ಮತ್ತು ರಾಜ್ಯ ಸರ್ಕಾರದ ಬಸವ ವಸತಿ, ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆಗಳ ಕಾರ್ಯಗತೀಕರಣದ ಬಗ್ಗೆ ಮಾಹಿತಿ ಪಡೆದು ಅವುಗಳ ಅನುಷ್ಠಾನ ಕುರಿತು ಮಾರ್ಗದರ್ಶನ ನೀಡಿದರು.

ಇದಲ್ಲದೆ, ಏಕ ನಿವೇಶನ ವಿನ್ಯಾಸ ಅನುಮೋದನೆ, ಕಟ್ಟಡ ನಕ್ಷೆ ಅನುಮೋದನೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯಗಳಲ್ಲಿ ಎದುರಾಗುತ್ತಿರುವ ಅಡಚಣೆಗಳು ಸೇರಿದಂತೆ ಸ್ಥಳೀಯ ಆಡಳಿತ ಸಂಬಂಧಿತ ವಿಷಯಗಳ ಕುರಿತು ಚರ್ಚಿಸಲಾಯಿತು.

ನಾರಾವಿ ಗ್ರಾಮ ಪಂಚಾಯತಿಯು ಸ್ವಂತ ಆದಾಯ ಹೆಚ್ಚಿಸಲು ಕೈಗೊಂಡ ಕ್ರಮಗಳು, ಉತ್ತಮ ಆಡಳಿತ ವ್ಯವಸ್ಥೆ ಮತ್ತು ಸಾರ್ವಜನಿಕ ಸೇವೆಯಲ್ಲಿ ಆಡಳಿತ ಮಂಡಳಿಯ ತೊಡಗಿಸಿ ಕೊಳ್ಳುವಿಕೆಯ ಕಾರ್ಯವೈಖರಿ ಬಗ್ಗೆ ಶಾಸಕರು ಸಂತೋಷ ವ್ಯಕ್ತಪಡಿಸಿ ಪ್ರಶಂಸಿಸಿದರು.

Related posts

ಎಕ್ಸಲೆ೦ಟ್ ಮೂಡುಬಿದಿರೆ: ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪ೦ದ್ಯಾಟ ಉದ್ಘಾಟನೆ

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya

ಪಿಲ್ಯ ಉಲ್ಫೆ ಪ್ರದೇಶದಲ್ಲಿ ಕಂಡು ಬಂದ ಚಿರತೆ

Suddi Udaya

ಕೊಕ್ಕಡ: ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆ ತಿವಿದು; ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya
error: Content is protected !!