September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ CSEET ಓರಿಯೆಂಟೇಷನ್ ಕಾರ್ಯಾಗಾರ

ಬೆಳ್ತಂಗಡಿ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಕಂಪೆನಿ ಸೆಕ್ರೆಟರಿ ಎಕ್ಸಿಕ್ಯೂಟಿವ್ ಪ್ರವೇಶ ಪರೀಕ್ಷೆ (CSEET) ಓರಿಯೆಂಟೇಷನ್ ಕಾರ್ಯಾಗಾರವು ವಿಜೃಂಭಣೆಯಿಂದ ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಕ್ಸೆಲ್ ಸಮೂಹ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ CS ಸಂತೋಷ್ ಪ್ರಭು ಹಾಗೂ ICSI ಮಂಗಳೂರು ಚಾಪ್ಟರ್‌ನ ಆಡಳಿತಾಧಿಕಾರಿ ಶಂಕರ್ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ನವೀನ್ ಕುಮಾರ್ ಮರಿಕೆ, ವಾಣಿಜ್ಯ ವಿಭಾಗದ ಡೀನ್ ಸಂತೋಷ್ ಕೆ.ಕೆ. ಹಾಗೂ ಮುಖ್ಯಸ್ಥರಾದ ಪ್ರಸನ್ನ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸುಮಂತ್ ಕುಮಾರ್ ಜೈನ್ ಅವರು “ದೇಶದ ಅಭಿವೃದ್ಧಿಯಲ್ಲಿ ಕಂಪೆನಿ ಸೆಕ್ರೆಟರಿಗಳ ಕೊಡುಗೆ ಅಪಾರವಾಗಿದ್ದು, ವಿದ್ಯಾರ್ಥಿಗಳು ವೃತ್ತಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು” ಎಂದರು.

ಪ್ರಾಂಶುಪಾಲರಾದ ನವೀನ್ ಕುಮಾರ್ ಮರಿಕೆ ಅವರು “ಪಿ.ಯು.ಸಿ ಹಂತದಲ್ಲಿಯೇ CS/CA ತರಬೇತಿ ಪಡೆದರೆ, ವಿದ್ಯಾರ್ಥಿಗಳು ಕಿರಿಯ ವಯಸ್ಸಿನಲ್ಲೇ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು” ಎಂದು ಹೇಳಿದರು.

CS ಸಂತೋಷ್ ಪ್ರಭು ಅವರು ಕಂಪೆನಿ ಸೆಕ್ರೆಟರಿ ವೃತ್ತಿಯ ವಿವಿಧ ಹಂತಗಳು, ಪರೀಕ್ಷಾ ತಯಾರಿ ಹಾಗೂ ಯಶಸ್ಸಿನ ಕುರಿತಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಸ್ವಾಗತವನ್ನು ನೈದಿಲೆ, ವಂದನೆಯನ್ನು ಹಂಶಿಕಾ ಸಲ್ಲಿಸಿದ್ದು, ನಿರೂಪಣೆಯನ್ನು ಯಾನ ಪೊನ್ನಮ್ಮ ನಿರ್ವಹಿಸಿದರು.

Related posts

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಇಂದಿನಿಂದ ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿಯಲ್ಲಿ ಬಟ್ಟೆಗಳ ಮಾರಾಟ

Suddi Udaya

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya
error: Content is protected !!