37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತವರದಿ

ಉಜಿರೆ; ಲಾರಿ ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಸಾವು

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ರಸ್ತೆಯ ಉಜಿರೆಯಲ್ಲಿ ಬುಧವಾರ ನಡೆದ ಲಾರಿ-ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಸಮೀಪದ ನಿವಾಸಿ ಪುರುಷೋತ್ತಮ ಯಾನೆ ಬಾಲು (44), ಗುರುವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬುಧವಾರ ಸಂಜೆ ಉಜಿರೆ ಸಮೀಪ ಅವರು ಚಲಾಯಿಸುತ್ತಿದ್ದ ಬೈಕಿಗೆ ಲಾರಿ ಡಿಕ್ಕಿ ಹೊಡೆದಿತ್ತು. ಇದರಿಂದ ತೀವ್ರ ಗಾಯಗೊಂಡಿದ್ದ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಗಾರೆ ಕಾರ್ಮಿಕರಾಗಿದ್ದ ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ಇಂಗ್ಲಿಷ್ ಮತ್ತು ಸಮಾಜಶಾಸ್ತ್ರ ವಿಷಯಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!