September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಕರಣ : ಸ್ವಾಮೀಜಿಗಳ ನಿಯೋಗದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಭೇಟಿ, ಎನ್ಐಎ ತನಿಖೆಗೆ ವಹಿಸುವಂತೆ ಮನವಿ

ಬೆಂಗಳೂರು: ‘ಧರ್ಮಸ್ಥಳ ಪ್ರಕರಣದ ಎಲ್ಲಾ ಬೆಳವಣಿಗೆಗಳನ್ನು ನಾನೇ ಖುದ್ದಾಗಿ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಸಚಿವ ಸಂಪುಟ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದ ಸ್ವಾಮೀಜಿಗಳ ನಿಯೋಗಕ್ಕೆ ಮಹತ್ವದ ಭರವಸೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಮಾಸ್ಕ್​​ಮ್ಯಾನ್ ಚಿನ್ನಯ್ಯ ಮಾಡಿರುವ ಆರೋಪ ಸಂಬಂಧಿತ ಎಲ್ಲ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕೆಂಬ ಆಗ್ರಹ ಹೆಚ್ಚಾದ ಬೆನ್ನಲ್ಲೇ, ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ನೇತೃತ್ವದ ಸನಾತನ ಸಂತ ನಿಯೋಗ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಎನ್ಐಎ ತನಿಖೆಗೆ ವಹಿಸುವಂತೆ ಮನವಿ ಸಲ್ಲಿಸಿತು.

ಗೃಹ ಸಚಿವ ಅಮಿತ್ ಶಾ ರ ದೆಹಲಿ ಕಚೇರಿಯಲ್ಲಿ ಭೇಟಿಯಾದ ಸ್ವಾಮೀಜಿಗಳು, ಧರ್ಮಸ್ಥಳ ಪ್ರಕರಣ ಕುರಿತು ಗೃಹ ಸಚಿವರ ಜೊತೆಗೆ ಸುದೀರ್ಘ ಚರ್ಚೆ ನಡೆಸಿದರು. ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ಕುರಿತು ಮಾಹಿತಿ ನೀಡಿದರು.

ಬಳಿಕ ಮಾತನಾಡಿದ ಅಮಿತ್ ಶಾ ರವರು ಧರ್ಮಸ್ಥಳ ಪ್ರಕರಣದ ಬಗ್ಗೆ ಸಚಿವ ಸಂಪುಟ ಸಭೆ ನಡೆಸಲಿದೆ. ಧರ್ಮ ಕ್ಷೇತ್ರಗಳ ವಿರುದ್ಧದ ಅಪಪ್ರಚಾರಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ತರುತ್ತೇವೆ. ನೀವು ಸಮಾಜವನ್ನ ಜಾಗೃತಿಗೊಳಿಸಿ ಎಂದು ಸ್ವಾಮೀಜಿಗಳ ಬಳಿ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಸ್ವಾಮೀಜಿಗಳಿಂದ ಸುಮಾರು ಒಂದು ಗಂಟೆಗಳ ಕಾಲ ಮಾಹಿತಿ ಪಡೆದ ನಂತರ ಅಮಿತ್ ಶಾ ಈ ಪ್ರತಿಕ್ರಿಯೆ ನೀಡಿದರು.

ಧರ್ಮಸ್ಥಳ ಪ್ರಕರಣದಲ್ಲಿ ಯೂಟ್ಯೂಬರ್​​ಗಳಿಗೆ ವಿದೇಶಗಳಿಂದ ಹಣಕಾಸು ನೆರವು ಹರಿದು ಬಂದಿದೆ ಎಂಬ ಆರೋಪ ಸಂಬಂಧ ಜಾರಿ ನಿರ್ದೇಶನಾಲಯ ಈಗಾಗಲೇ ಪ್ರಾಥಮಿಕ ತನಿಖೆ ಆರಂಭಿಸಿದೆ. ಇದೀಗ ಎನ್​ಐಎ ತನಿಖೆ ಬಗ್ಗೆ ಕುತೂಹಲ ಹೆಚ್ಚಾಗಿದೆ.

Related posts

ಅರಸಿನಮಕ್ಕಿ: ಕಾಪಿನಡ್ಕ ನಿವಾಸಿ ತಿಮ್ಮಪ್ಪ ಶೆಟ್ಟಿಗಾರ್ ನಿಧನ

Suddi Udaya

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

Suddi Udaya

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ದ.ಕ. ಜಿಲ್ಲಾ ಘಟಕದ ಅಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ, ಪ್ರಧಾನ ಸಂಚಾಲಕರಾಗಿ ಡಾ. ನಿರಂಜನ್ ರೈ ನೇಮಕ

Suddi Udaya
error: Content is protected !!