September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ ಗ್ರಾ.ಪಂ. ಮಟ್ಟದ ಸ್ಪಂದನ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಪಟ್ರಮೆ : ಸ್ಪಂದನ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಪಟ್ರಮೆ ಇದರ ವಾರ್ಷಿಕ ಮಹಾಸಭೆಯು ಸೆ.3ರಂದು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರುತಿ ವಹಿಸಿಕೊಂಡರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಮನೋಜ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ , ಬೆಳ್ತಂಗಡಿ ವಲಯ ಮೇಲ್ವಿಚಾರಕರದ ಜಯಾನಂದ್ , ಕೊಕ್ಕಡ ವಲಯದ ಮೇಲ್ವಿಚಾರಕಾರದ ಶ್ರೀಮತಿ ವೀಣಾಶ್ರೀ ಉಪಸ್ಥಿತರಿದ್ದರು.

ಎಲ್.ಸಿ.ಆರ್.ಪಿ ನಳಿನಿ ಸ್ವಾಗತಿಸಿದರು. ವಲಯ ಮೇಲ್ವಿಚಾರಕರಾದ ವೀಣಾಶ್ರೀ ರವರು ಪ್ರಸ್ತಾವಿಕ ನುಡಿಗಳನ್ನಾಡಿದರು. ಎಮ್.ಬಿ.ಕೆ ಜಯ ರವರು 1 ವರ್ಷದ ವಾರ್ಷಿಕ ವರದಿಯನ್ನು ಮಂಡಿಸಿದರು. ವರದಿಗೆ ಅನುಮೋದನೆ ಪಡೆಯಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಕಾರ್ಯಕ್ರಮದ ಕುರಿತಾಗಿ ಮಾತನಾಡಿ ನಮ್ಮ ಗ್ರಾಮ ನಮ್ಮ ಜವಾಬ್ದಾರಿ ಎನ್ನುವ ಕಾರ್ಯಕ್ರಮದಲ್ಲಿ ತ್ಯಾಜ್ಯ ಸಂಗ್ರಹಣೆ ಮತ್ತು ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಪಂಚಾಯತ್ ಅಧ್ಯಕ್ಷರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಿದ್ಯಾ ಸರಸ್ವತಿ ರವರು 2024-2025 ನೆ ಸಾಲಿನ ಸಿಎ ಆಡಿಟ್ ರಿಪೋರ್ಟ್ ನ್ನು ಮಂಡಿಸಿದರು. ಬೆಳ್ತಂಗಡಿ ವಲಯ ಮೇಲ್ವಿಚಾರಕರಾದ ಜಯಾನಂದ್ ಸಂಜೀವಿನಿ ಯೋಜನೆಯ ಬಗ್ಗೆ, ದ್ಯೇಯೋದ್ದೇಶಗಳ ಬಗ್ಗೆ, ಜೀವನೋಪಾಯ ಚಟುವಟಿಕೆ ಬಗ್ಗೆ, ವಾರ್ಡ್ ರಚನೆ ಒಕ್ಕೂಟದ ಬಗ್ಗೆ ಹಾಗೂ ಹಲವಾರು ವಿಷಯ ಗಳ ಬಗ್ಗೆ, ಸವಿ ವಿಸ್ತಾರವಾದ ಮಾಹಿತಿ ನೀಡಿದರು. FNHW ಯೋಜನೆ ಯಡಿ ಪೋಷಣ ಅಭಿಯಾನ ಕಾರ್ಯಕ್ರಮವನ್ನು ನಡೆಸಲಾಯಿತು. ಸಮುದಾಯ ಆರೋಗ್ಯ ಅಧಿಕಾರಿ ಭುವನೇಶ್ವರಿ ಯವರು ಪೌಷ್ಠಿಕ ಆಹಾರ ಆರೋಗ್ಯದ ಬಗ್ಗೆ ದಿನನಿತ್ಯ ಆಹಾರ ಶೈಲಿಯ ಬಗ್ಗೆ ಮಾಹಿತಿ ನೀಡಿದರು.

ಈ ಸಂಧರ್ಭದಲ್ಲಿ ಮಾದಕ ಮುಕ್ತ ಕರ್ನಾಟಕ ಅಭಿಯಾನವನ್ನು ಮಾಡಲಾಯಿತು. ಮಾದಕ ಪದಾರ್ಥ ಗಳ ವ್ಯಸನವು ಸಮಾಜದ ಮೇಲೆ ಆಗುತ್ತಿರುವ ದುಷ್ಪರಿಣಾಮದ ಕುರಿತು ಪ್ರತಿಜ್ಞೆಯನ್ನು ಮಾಡಲಾಯಿತು. ಸಭೆಯಲ್ಲಿ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಸಂಜೀವಿನಿ ಒಕ್ಕೂಟ ದ ಸಿಬ್ಬಂದಿಗಳು, ಸಮುದಾಯ ಅರೋಗ್ಯ ಅಧಿಕಾರಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಕೃಷಿ ಸಖಿ ವಿನಂತಿನಿ ಕಾರ್ಯಕ್ರಮವನ್ನು ನಿರೂಪಿಸಿ, ವಿದ್ಯಾ ಧನ್ಯವಾದವಿತ್ತರು.

Related posts

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ರವರಿಂದ ಗೌರವಾರ್ಪಣೆ

Suddi Udaya

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya

ಆರಂಬೋಡಿ ಗ್ರಾಮದ 8 ಶಾಲೆಗಳ ವಿದ್ಯಾರ್ಥಿಗಳಿಗೆ ಮನೋಜ್- ಧನ್ಯಶ್ರೀ ದಂಪತಿಯಿಂದ ಪುಸ್ತಕ ವಿತರಣೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya

ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!