37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ. 9: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಿಂದ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ (ಎಂಡೋಸಲ್ಫಾನ್ ಸಂತ್ರಸ್ತರಿಗೆ) ಪ್ರಾಥಮಿಕ ಆರೋಗ್ಯ ಕೇಂದ್ರ ಕ್ಯಾಂಪಸ್, ಉಜಿರೆ, ಶ್ರೀ ಗಣೇಶ ಸೇವಾ ಟ್ರಸ್ಟ್ (ರಿ.) ನ ಸೇವಾ ಯೋಜನೆ, ಪ್ರೆಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆಯು ಸೆ.9 ರಂದು ಬೆಳಿಗ್ಗೆ 11 ಕ್ಕೆ ಜರುಗಲಿದೆ ಎಂದು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಆಡಳಿತದಾರ
ಡಾ. ವಸಂತ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಉದ್ಘಾಟನೆಯನ್ನು ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ನೆರವೇರಿಸಲಿರುವರು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಪ್ರೆಸ್ ಕ್ಲಬ್ ನ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿ0ಜೆ ಭಾಗವಹಿಸುವರು. ಶ್ರೀ ಗಣೇಶ ಸೇವಾ ಟ್ರಸ್ಟ್ ನ ಅಧ್ಯಕ್ಷ ಮಹಾಬಲ ಮಾರ್ಲ ಅಧ್ಯಕ್ಷತೆಯನ್ನು ವಹಿಸುವರು.

ಕಾರ್ಯಕ್ರಮದಲ್ಲಿ ಎಂಡೋಸಲ್ಫಾನ್ ಕಾರ್ಯಕ್ರಮದ ದ.ಕ. ಜಿಲ್ಲಾ ನೋಡೆಲ್ ಅಧಿಕಾರಿ ಡಾ. ಜಸಿಂತಾ ಡಿ’ಸೋಜ, ಶ್ರೀ ಗಣೇಶ ಸೇವಾ ಟ್ರಸ್ಟ್ ನ ಸಲಹಾ ಸಮಿತಿ ಸದಸ್ಯ ಶ್ಯಾಮ್ ಪ್ರಕಾಶ್, ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಸಲಹಾ ಸಮಿತಿ ಸದಸ್ಯರಾದ ರೋಶನ್ ಪ್ರೇಮರಾಜ್ ಸಿಕ್ವೇರಾ, ಪ್ರಮೋದ್ ಆರ್ ನಾಯಕ್ ಭಾಗವಹಿಸುವರು.

Related posts

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya
error: Content is protected !!