ಲಾಯಿಲ: ಕರ್ನೋಡಿ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ “ಗುರುವಂದನಾ ಕಾರ್ಯಕ್ರಮ” ನಡೆಯಿತು.
ಶಾಲೆಯಲ್ಲಿ 25 ವರುಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀಮತಿ ಬಿ.ಕುಸುಮಾವತಿ ಇವರಿಗೆ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ “ಗೌರವಾರ್ಪಣೆ” ಸಲ್ಲಿಸಲಾಯಿತು.

ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷ ಸಂತೋಷ್ ಕುಮಾರ್, ಅಧ್ಯಕ್ಷ ಸುರೇಶ್ ಶೆಟ್ಟಿ, ಕಾರ್ಯದರ್ಶಿ ಗಣೇಶ್. ಆರ್ , ಎಸ್.ಡಿ.ಎಮ್.ಸಿ ಅಧ್ಯಕ್ಷೆ ಶ್ರೀಮತಿ ಸೌಮ್ಯಾ, ಉಪಾಧ್ಯಕ್ಷೆ ಶ್ರೀಮತಿ ವಿಜಯಾ, ಶಾಲಾ ಮುಖ್ಯ ಶಿಕ್ಷಕರಾದ ಜಗನ್ನಾಥ ಎಂ , ನಿವೃತ್ತ ಶಿಕ್ಷಕಿ ಶ್ರೀಮತಿ ಬಿ.ಕುಸುಮಾವತಿ ಉಪಸ್ಥಿತರಿದ್ದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಬಿ. ಕುಸುಮಾವತಿ ಇವರು 25 ವರುಷಗಳ ಶಾಲೆಯೊಂದಿಗಿನ ತನ್ನ ಒಡನಾಟವನ್ನು ಮೆಲುಕು ಹಾಕಿದರು. ಶಾಲೆಯ ಸಹ ಶಿಕ್ಷಕಿಯರಾದ ಶ್ರೀಮತಿ ಗಂಗಾರಾಣಿ ಜೋಶಿ ಹಾಗೂ ಶ್ರೀಮತಿ ತ್ರಿಶಾಲ ಇವರು ಬಿ. ಕುಸುಮಾವತಿ ಇವರೊಂದಿಗಿನ ತಮ್ಮ ಒಡನಾಟದ ಬಗ್ಗೆ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ಜಗನ್ನಾಥ್. ಎಂ ಇವರು ಬಿ. ಕುಸುಮಾವತಿ ಇವರ ಸೇವೆಯನ್ನು ಶ್ಲಾಘಿಸಿ ಅವರು ನಿವೃತ್ತರಾದ ನಂತರವೂ ಶಾಲೆಗೆ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಕೊಡುಗೆಗಳನ್ನು ನೆನಪಿಸಿದರು. ಸಹ ಶಿಕ್ಷಕಿ ಶ್ರೀಮತಿ ಮಮತಾ ಕಾರ್ಯಕ್ರಮ ನಿರೂಪಿಸಿ. ಸಹ ಶಿಕ್ಷಕ ಕೃಷ್ಣ ಕುಮಾರ್, ಮತ್ತು ಶಿಕ್ಷಕಿ ಲೀನಾ ಡಿಸೋಜಾ ಇವರು ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಲು ಸಹಕರಿಸಿದರು. ಪ್ರಸ್ತುತ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಶಿಕ್ಷಕರಿಗೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಉಡುಗೊರೆಯನ್ನು ನೀಡಿ ಗೌರವಿಸಲಾಯಿತು. ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು,ಸದಸ್ಯರು, ಹಳೆ ವಿದ್ಯಾರ್ಥಿಗಳು,S.D.M.C ಸಮಿತಿಯ ಸದಸ್ಯರು ಪೋಷಕರು, ಶಾಲಾ ಮಕ್ಕಳು ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗಣೇಶ್ ಆರ್ ಸ್ವಾಗತಿಸಿ, ಸದಸ್ಯೆ ಶ್ರೀಮತಿ ದಿವ್ಯಾ ಧನ್ಯವಾದಗೈದರು.











