37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರಿಂದ ದಾಳಿ: ದನದ ತಲೆ ಸಹಿತ ಪರಿಕರಗಳು ವಶ; ಆರೋಪಿಗಳು ಪರಾರಿ

ಬೆಳ್ತಂಗಡಿ : ಅಕ್ರಮವಾಗಿ ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಪ್ರಕರಣ ದಾಖಲಿಸಿದ್ದಾರೆ‌.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಮಹಮ್ಮದ್ ರಫೀಕ್ ಯಾನೆ ಅಪ್ಪಿ ಎಂಬಾತನ ಮನೆಯಲ್ಲಿ ದನಗಳನ್ನು ಕಳ್ಳತನ ಮಾಡಿಕೊಂಡು ತಂದು ಅಕ್ರಮ ದನಗಳನ್ನು ವಧೆ ಮಾಡುತ್ತಿರುವ ಮಾಹಿತಿ ಮೇರೆಗೆ ಸೆ.4 ರಂದು ರಾತ್ರಿ 9 ಗಂಟೆಗೆ ಮೇಲಾಧಿಕಾರಿಗಳಿಂದ ಸರ್ಚ್ ವಾರಂಟ್ ಪಡೆದು ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದಾಗ ಮೂರು ಕತ್ತಿ,ಎರಡು ಮರದ ಹಿಡಿ ಇರುವ ಚೂರಿ,ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರ, ಒಂದು ಮರದ ತುಂಡು, ಒಂದು ನೀಲಿ ಟರ್ಪಾಲು, ಜೀವಂತ ಒಂದು ಹಸು ಮತ್ತು ಒಂದು ಕರು, ದನದ ತ್ಯಾಜ್ಯ ತುಂಬಿದ ಒಂದು ಓಮಿನಿ ಕಾರು, 9 ಕಡಿದ ದನದ ತಲೆಗಳನ್ನು ಬೆಳ್ತಂಗಡಿ ಪಶು ಇಲಾಖೆಯ ವೈದ್ಯರನ್ನು ಕರೆದು ಮಹಜರು ನಡೆಸಿ ವಶಪಡಿಸಿಕೊಳ್ಳಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.4 ರಂದು ಕಲಂ 112(2),303(2) BNS 2023 ಮತ್ತು ಕಲಂ 4,5,6,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ಅಡಿಯಲ್ಲಿ ಆರೋಪಿ ಮಹಮ್ಮದ್ ರಫೀಕ್ ಯಾನೆ ಅಪ್ಪಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ದಾಳಿ ವೇಳೆ ಪರಾರಿಯಾಗಿದ್ದಾರೆ. ಪ್ರಮುಖ ಆರೋಪಿ ಮೊಹಮ್ಮದ್‌ ರಫೀಕ್ ಯಾನೆ ಅಪ್ಪಿಗೆ ಬೆಳ್ತಂಗಡಿ ಪೊಲೀಸರು ಹಲವು ಭಾರಿ ಎಚ್ಚರಿಕೆ ನೀಡಿದ್ದರು ಈತ ಮತ್ತೆ ದನ ವಧೆ ಮಾಡುವ ದಂಧೆ ಮುಂದುವರಿಸಿದ್ದ ಎನ್ನಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದಲ್ಲಿ ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ ಹೆಚ್ ಮಾದರ ಹಾಗೂ ಸಿಬ್ಬಂದಿ ಶ್ರೀನಿವಾಸ್, ಸತೀಶ್, ಜಗದೀಶ್ ಚಾಲಕ ಧರೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಮಲವಂತಿಗೆ ನೇತ್ರಾವತಿ ಕಿನಾರೆ ಕ್ರೀಡಾ ಸಂಘ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಉಜಿರೆ: ಗಾಂಧಿನಗರದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಗೆ ಪ್ರಶಸ್ತಿ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

Suddi Udaya
error: Content is protected !!