37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಲ್ನಾಡ್ ಐಕಾನ್ ಅಶ್ವತ್ಥ್ ಎಸ್.ಎಲ್. ಅವರಿಗೆ ಒಕ್ಕಲಿಗ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ

ಕೊಪ್ಪ ತಾಲ್ಲೂಕು ಒಕ್ಕಲಿಗರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಮುದಾಯದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಕೊಪ್ಪ ತಾಲೂಕಿನ ಸಕ್ರೆಬೈಲ್ ಗ್ರಾಮೀಣ ಭಾಗದ ಮೂಲದವರಾದ, ಕರಾವಳಿಯಲ್ಲಿ ಸ್ಥಾಪಿತ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಅಶ್ವತ್ ಎಸ್.ಎಲ್. ಅವರನ್ನು ಗೌರವಿಸಲಾಯಿತು.

“ಮಲ್ನಾಡ್ ಐಕಾನ್” ಎಂದೇ ಗುರುತಿಸಿಕೊಂಡಿರುವ ಅಶ್ವತ್ ಎಸ್.ಎಲ್. ಅವರು ಸ್ಥಾಪಿಸಿದ ಶಿಕ್ಷಣ ಸಂಸ್ಥೆ ಇಂದು ಕೇವಲ ಕರ್ನಾಟಕದಲ್ಲೇ ಅಲ್ಲ, ದೇಶದ ಅನೇಕ ಭಾಗಗಳಿಂದ ವಿದ್ಯಾರ್ಥಿಗಳನ್ನು ಆಕರ್ಷಿಸಿ ಉತ್ತಮ ಶಿಕ್ಷಣ ನೀಡುತ್ತಿರುವುದರಿಂದ ಹೆಸರುವಾಸಿಯಾಗಿದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನೈತಿಕ ಮೌಲ್ಯಗಳು ಮತ್ತು ಸ್ಪರ್ಧಾತ್ಮಕ ಮನೋಭಾವ ಬೆಳೆಸುವಲ್ಲಿ ಅವರ ಪಾತ್ರ ಅಪಾರ. ಗ್ರಾಮೀಣ ಪ್ರದೇಶದಲ್ಲಿದ್ದರೂ ಅಂತರಾಷ್ಟ್ರೀಯ ಮಟ್ಟದ ಅವಕಾಶಗಳನ್ನು ಒದಗಿಸುವ ದೃಷ್ಟಿಕೋನ ಅವರನ್ನು ಇತರರಿಂದ ವಿಭಿನ್ನರನ್ನಾಗಿಸಿದೆ. ಈ ಶ್ರೇಷ್ಠ ಸೇವೆಯನ್ನೇ ಶ್ಲಾಘಿಸಿ ಒಕ್ಕಲಿಗ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, “ನನ್ನ ಸಾಧನೆಗೆ ಮಲೆನಾಡಿನ ಪರಿಸರ ಮತ್ತು ಜನರ ಪ್ರೇರಣೆಯೇ ಕಾರಣ. ಮುಂದಿನ ದಿನಗಳಲ್ಲಿ ಈ ಭಾಗದಲ್ಲೇ ಉತ್ತಮ ಶಿಕ್ಷಣ ಸಂಸ್ಥೆ ನಿರ್ಮಿಸುವ ಕನಸು ಇದೆ. ದೇವರಿಗೆ ಸಲ್ಲಿಸುವ ಸೇವೆ ದೇವರಿಗೆ ತಲುಪುತ್ತದೆಯೋ ಇಲ್ಲವೋ ಗೊತ್ತಿಲ್ಲ, ಆದರೆ ಅಶಕ್ತರಿಗೆ ಮಾಡುವ ಸೇವೆಯ ಪ್ರತಿಯೊಂದು ಕಣವೂ ದೇವರಿಗೆ ಸೇರುತ್ತದೆ. ಆರೋಗ್ಯ ಮತ್ತು ಶಿಕ್ಷಣ ಸೇವೆಯಲ್ಲಿ ಸಮುದಾಯ ತೊಡಗಿಸಿಕೊಳ್ಳುವುದು ಮಾದರಿಯಾಗಬೇಕು. ಎಲ್ಲರೊಳಗೂ ಒಂದಾಗಿ ಬದುಕಬೇಕು” ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಶಾಸಕರಾದ ಟಿ.ಡಿ. ರಾಜೇಗೌಡ, ರಾಜೀವ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಬಿ.ಸಿ. ಭಗವಾನ್, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಸಹದೇವ್ ಬಾಲಕೃಷ್ಣ, ಉಪಾಧ್ಯಕ್ಷ ಹೆಚ್.ಜೆ. ರಾಜಗೋಪಾಲ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ : ಮಿನಿ ಬಸ್ ಪಲ್ಟಿ, ನಾಲ್ಕು ಮಂದಿ ಗಂಭೀರ ಹಲವರಿಗೆ ಗಾಯ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕೋರ್ಟ್ ಗೆ ವರದಿ ಸಲ್ಲಿಕೆ: ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿರುವುದು ಧೃಡ

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕಾರುಗಳ ನಡುವೆ ಅಪಘಾತ:

Suddi Udaya

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya
error: Content is protected !!