37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮ ಜಾಗೃತಿ ಸಮಾವೇಶ

ಧಮ೯ಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಎಲ್ಲಾ ದೇವಸ್ಥಾನ, ದೈವಸ್ಥಾನ ಮತ್ತು ಬಸದಿಗಳ ಆಡಳಿತ ಮೊಕ್ತೇಸರರು, ಪದಾಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ಧರ್ಮ ಜಾಗೃತಿ ಸಮಾವೇಶ ಸೆ.5ರಂದು ಅಮೃತವರ್ಷಿಣಿ ಸಭಾಭವನದಲ್ಲಿ ಜರುಗಿತು.

ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಎಲ್ಲಾ ದೇವಸ್ಥಾನ, ದೈವಸ್ಥಾನ ಮತ್ತು ಬಸದಿಗಳ ಆಡಳಿತ ಮೊಕ್ತೇಸರರು, ಪದಾಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ಸರ್ವಸದಸ್ಯರು ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಎದುರಿನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.


ಬಳಿಕ ಅಲ್ಲಿಂದ ಅಮೃತವರ್ಷಿಣಿ ಸಭಾಭವಕ್ಕೆ ಮೆರವಣಿಗೆಯಲ್ಲಿ ಆಗಮಿಸಿದರು.ಧಮ೯ಸ್ಥಳದ ಧಮಾ೯ಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಪ್ರಜ್ವಲನೆಗೊಳಿಸಿ ಧಮ೯ಜಗೃತಿ ಸಮಾವೇಶಕ್ಕೆ ಚಾಲನೆ ನೀಡಿದರು.


ಮುಖ್ಯ ಅತಿಥಿಗಳಾಗಿ ಲಕ್ಷ್ಮೀನಾರಾಯಣ ಅಸ್ರಣ್ಣರು, ಕಟೀಲು, ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ದಾಮೋದರ ಶರ್ಮಾ, ವಿದ್ವಾನ್ ಹಿರಣ್ಯ ವೆಂಕಟೇಶ್ವರ ಭಟ್ಟ, ವಿದ್ವಾನ್ ನಾಗೇಂದ್ರ ಭಾರದ್ವಾಜ, ಧನಂಜಯ ರಾವ್ ಬಿ.ಕೆ. ಮಾಜಿ ಸಚಿವ ಅಭಯಚಂದ್ರ ಜೈನ್, ಡಿ.ಹಷೇ೯ಂದ್ರ ಕುಮಾರ್, ಜೀವಂಧರ್ ಕುಮಾರ್ ಪಡ್ಡಾರಬೆಟ್ಟ, ಶರತ್ ಕೃಷ್ಣ ಪಡ್ವೆಟ್ನಾಯ ಉಜಿರೆ, ಶಶಿಧರ ಶೆಟ್ಟಿ ಬರೋಡ, ಶಿವಪ್ರಸಾದ್ ಅಜಿಲ ಸೇರಿದಂತೆ
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಎಲ್ಲಾ ದೇವಸ್ಥಾನ, ದೈವಸ್ಥಾನ ಮತ್ತು ಬಸದಿಗಳ ಆಡಳಿತ ಮೊಕ್ತೇಸರರು, ಪದಾಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ಸರ್ವಸದಸ್ಯರು, ಧಾಮಿ೯ಕ ಪರಿಷತ್ ಸದಸ್ಯರು ಭಾಗವಹಿಸಿದ್ದಾರೆ.


ಡಾ. ಎಂ.ಮೋಹನ ಆಳ್ವ, ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಸಂಸ್ಥೆಗಳು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಡಾ. ಸುವೀರ್ ಜೈನ್ ಧನ್ಯವಾದವಿತ್ತರು. ಎಸ್.ಡಿ.ಎಮ್ ಕಾಲೇಜು ಉಜಿರೆಯ ಉಪನ್ಯಾಸಕ ಡಾ. ಶ್ರೀಧರ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya

ಅಳದಂಗಡಿ ವರಮಹಾಲಕ್ಮಿ ಪೂಜಾ ಸಮಿತಿಯಿಂದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ವೇಣೂರು ಮಹಾಮಸ್ತಕಾಭಿಷೇಕ: ಡಿ. 17 ರಂದು ಬೃಹತ್ ವೈದ್ಯಕೀಯ ಶಿಬಿರ

Suddi Udaya
error: Content is protected !!