September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ

ಉಜಿರೆ: ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ ನವದೆಹಲಿ, ಇವರು ೨೦೨೫ ಜುಲೈ ತಿಂಗಳಿನಲ್ಲಿ ನಡೆಸಿದ ೨೦೨೪-೨೫ನೇ ಸಾಲಿನ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಗೆ ಶೇ.೧೦೦ ಫಲಿತಾಂಶ ಲಭಿಸಿದೆ.

ಪರೀಕ್ಷೆಗೆ 47ವಿದ್ಯಾರ್ಥಿನಿಯರು ಹಾಜರಾಗಿದ್ದು, ಅದರಲ್ಲಿ 32 ವಿದ್ಯಾರ್ಥಿನಿಯರು ಉತ್ತಮ ದರ್ಜೆಯಲ್ಲಿ ಹಾಗೂ 15 ವಿದ್ಯಾರ್ಥಿನಿಯರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಕೋಪಾ ವೃತ್ತಿಯ ಕು. ಅಶೂರಾ (549/600) ಅಂಕ ಪಡೆದು ಪ್ರಥಮ ಸ್ಥಾನ ಪಡೆದರೆ ಕು. ಸೌಜನ್ಯ (537/600) ಅಂಕ ಪಡೆದು ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ಅದೇ ರೀತಿ ಈ ವರುಷ ಅಂದರೆ ೨೦೨೪-೨೫ ನೇ ಸಾಲಿನಲ್ಲಿ ಆರಂಭಿಸಿದ ಫ್ಯಾಷನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿಯಲ್ಲಿ ಕು. ರಾಜಶ್ರೀ (551/600) ಅಂಕ ಪಡೆದು ಪ್ರಥಮ ಸ್ಥಾನ ಪಡೆದರೆ ಕು. ಸೌರಭ (538/600) ಅಂಕ ಪಡೆದು ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

ಸಂಸ್ಥೆಯ ಅಧ್ಯಕ್ಷ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ಎಸ್. ಸಂಸ್ಥೆಯ ಪ್ರಾಂಶುಪಾಲರು, ಕಿರಿಯ ತರಬೇತಿ ಅಧಿಕಾರಿಗಳನ್ನು ಹಾಗೂ ಎಲ್ಲಾ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ.

Related posts

ಜು.10 ರಿಂದ ಆ.20ರವರೆಗೆ ಕುಮಟಾದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ ಅವರ ಚಾತುರ್ಮಾಸ್ಯ ವ್ರತಾಚರಣೆ

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಧರ್ಮಸ್ಥಳ ಪ್ರಾ. ಆ. ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ವಿಜಯಲಕ್ಷ್ಮಿ ಕೆ. ಎಸ್. ಸೇವಾ ನಿವೃತ್ತಿ.

Suddi Udaya

ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ದಿಡುಪೆ – ಸಂಸೆ ಅರಣ್ಯ ರಸ್ತೆಯೊಳಗೆ ವಿಡಿಯೋ ಮಾಡಿದ ಪ್ರಕರಣ: ಬೆಳ್ತಂಗಡಿ ವನ್ಯಜೀವಿ ಇಲಾಖೆಯಿಂದ ಮೂವರಿಗೆ ದಂಡ

Suddi Udaya

ಪೆರ್ಲ-ಬೈಪಾಡಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

Suddi Udaya
error: Content is protected !!