23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ., ಉಡುಪಿ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಸೆ.೫ರಂದು ಗುರುವಾಯನಕೆರೆ ಛಾಯಾಭವನದಲ್ಲಿ ಜರಗಿತು.

ಪದ್ಮಾವತಿ ಕುಶಾಲಪ್ಪ ರೈ ಪದ್ಮುಂಜ ಹಾಗೂ ನಂದಿನಿ ವಸಂತ್ ಶರ್ಮ ಉಜಿರೆ ಇವರನ್ನು ಸನ್ಮಾನಿಸಲಾಯಿತು.

ಸನ್ಮಾನ ಪತ್ರವನ್ನು ವಲಯದ ಮಾಜಿ ಅಧ್ಯಕ್ಷ ಸುರೇಶ್ ಬಿ ಕೌಡಂಗೆ ಹಾಗೂ ವಲಯದ ಪ್ರಧಾನ ಕಾರ್ಯದರ್ಶಿ ವಿಜಯ ಹೆಚ್. ಭಟ್ ಓದಿದರು. ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.

ಗೌರವಾಧ್ಯಕ್ಷ ಜಗದೀಶ್ ಜೈನ್ ಧರ್ಮಸ್ಥಳ, ನಿಯೋಜಿತ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಾಜ್ ಉಜಿರೆ, ವಲಯದ ಗೌರವ ಸಲಹೆಗಾರರು ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಗಣೇಶ್ ಹೆಗ್ಡೆ ನಾರಾವಿ ಪ್ರಾರ್ಥನೆ ಗೈದರು. ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ ಸ್ವಾಗತಿಸಿ, ಉಮೇಶ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು. ದಾಮೋದರ್ ವಂದಿಸಿದರು.

Related posts

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆ

Suddi Udaya

ಸುಳ್ಳೋಡಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!