23.5 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪೋಷಣಾ ಜಾಗೃತಿ ಕಾರ್ಯಕ್ರಮ

ಉಜಿರೆ: ಪೋಷಣಾ ಮಾಸಾಚರಣೆಯ ಅಂಗವಾಗಿ, ಎಸ್‌ಡಿಎಂ ಕಾಲೇಜಿನ ಡಯಟ್ ಮತ್ತು ನ್ಯೂಟ್ರಿಷನ್ ವಿಭಾಗವು ಉಜಿರೆಯ ಎಸ್‌ಡಿಎಂ ಡಿ-ಅಡಿಕ್ಷನ್ ಸೆಂಟರ್‌ನ ಪ್ರತಿನಿಧಿಗಳಿಗಾಗಿ ಸೆ.6ರಂದು ಪೋಷಣಾ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತು.

ಈ ಕಾರ್ಯಕ್ರಮವನ್ನು ಎಸ್‌ಡಿಎಂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ಮೂಲ ವೈದ್ಯಕೀಯ ವಿಜ್ಞಾನ ವಿಭಾಗದ ಡೀನ್ರಾದ ಡಾ. ಬಾಲಕೃಷ್ಣ ಶೆಟ್ಟಿ ಅವರು ಯೋಜನಾಧಿಕಾರಿಗಳಾದ ಮಾಧವ್ ಗೌಡ ಅವರ ಸಾನ್ನಿಧ್ಯದಲ್ಲಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಡಾ. ಅಭಯ್ ಸಾಯಿ, ಪಿ.ಜಿ. ವಿದ್ಯಾರ್ಥಿ, ಅವರು ವ್ಯಸನಮುಕ್ತ ಜೀವನದಲ್ಲಿ ಸಮತೋಲಿತ ಆಹಾರದ ಮಹತ್ವ, ಪೌಷ್ಠಿಕಾಂಶಗಳ ಅಗತ್ಯತೆ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಉಪನ್ಯಾಸ ನೀಡಿದರು. ಡಿ-ಅಡಿಕ್ಷನ್ ಕೇಂದ್ರದ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಆರೋಗ್ಯಕರ ಆಹಾರ ಪದ್ಧತಿಗಳ ಕುರಿತು ಜ್ಞಾನವನ್ನು ಪಡೆದುಕೊಂಡರು.

Related posts

ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya
error: Content is protected !!