ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಹಾಗೂ ಸಿಬ್ಬಂದಿ ವರ್ಗದವರಿಗಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಆ.29ರಂದು ಕೆಸರುಗದ್ದೆ ಕ್ರೀಡಾಕೂಟವನ್ನು ಪೆರ್ಲದ ಮುಂಡತೋಡಿ ಬಳಿಯ ಗದ್ದೆಯಲ್ಲಿ ಆಯೋಜಿಸಲಾಯಿತು.

ಕ್ರೀಡಾಕೂಟವನ್ನು ಡಾ. ಸಂದೀಪ್, ಪ್ರೊಫೆಸರ್ ಇಲೆಕ್ಟ್ರಾನಿಕ್ಸ್ ವಿಭಾಗ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಡಾ. ರವೀಶ್ ಪಡುಮಲೆ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು, ತುಳುನಾಡಿನ ಸಂಸ್ಕೃತಿ, ಆಚರಣೆ ಮತ್ತು ಗ್ರಾಮೀಣ ಕ್ರೀಡೆಗಳ ಮಹತ್ವವನ್ನು ವಿದ್ಯಾರ್ಥಿ ವೃಂದಕ್ಕೆ ತಿಳಿಸಿದರು.

ವಿದ್ಯಾರ್ಥಿನಿ ಸಹನ ಪ್ರತಿಜ್ಞಾವಿಧಿ ಭೋದಿಸಿದರು. ವೇದಿಕೆಯಲ್ಲಿ ಗದ್ದೆಯ ಮಾಲೀಕರಾದ ಶ್ರೀಮತಿ ಶಾರದಾ ಮತ್ತು ಮಂಜುನಾಥ ಮುಂಡತೋಡಿ ಉಪಸ್ಥಿತರಿದ್ದರು.

ಸುಮಾರು 450 ವಿದ್ಯಾರ್ಥಿಗಳು ವಿವಿಧ ಸಾಂಪ್ರದಾಯಿಕ ಆಟಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಭಾಕರ್, ನಿತಿನ್, ಚರಣ್ ಸಹಕಾರ ನೀಡಿದರು. ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

Suddi Udaya

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

Suddi Udaya

ರೀಜೆಂಟ್ ಮಳಿಗೆ ಅಳದಂಗಡಿಯಿಂದ- ಗರ್ಡಾಡಿ ಹೊನ್ನಕಟ್ಟೆಗೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ 78ನೇಯ ಸಂಭ್ರಮದ ಸ್ವಾತಂತ್ರ್ಯೋತ್ಸವ: ನಿವೃತ್ತ ಸೈನಿಕರಾದ ಗಣೇಶ್ ಬಿ.ಎಲ್ ಹಾಗೂ ಶಿವ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!