September 6, 2026
ಅಪರಾಧ ಸುದ್ದಿ

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ: ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಬ್ಯಾಂಕಿನ ಮಾಜಿ ಸಿಬ್ಬಂದಿ ಸದಾಶಿವ ಯಾನೆ ಸುಜಿತ್ ಬಂಧಿತ ಆರೋಪಿಯಾಗಿದ್ದಾರೆ. ಮಂಗಳೂರಿನ ಪಡೀಲ್ ನಲ್ಲಿ ತಲೆ ಮರೆಸಿಕೊಂಡಿದ್ದ ಈತನನ್ನು ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ ಸೆ.5ರಂದು ವಶಕ್ಕೆ ಪಡೆದಿದ್ದರು. ಆರೋಪಿಯನ್ನು ಸೆ.6 ರಂದು ಸಂಜೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

*ಏನಿದು ಪ್ರಕರಣ:* ಬೆಳಾಲು ಸೇವಾ ಸಹಕಾರಿ ಬ್ಯಾಂಕಿನಲ್ಲಿ ಬೆಳಾಲು ನಿವಾಸಿ ಪ್ರಕಾಶ್ ಎಂಬಾತ 10 ಲಕ್ಷ ರೂಪಾಯಿ ಹಣ ಮೂರು ವರ್ಷದ ಅವಧಿಗೆ ಸಂಘದಲ್ಲಿ ಠೇವಣಿ ಇರಿಸಿ ಆ ದಿನದಂದು ಠೇವಣಿ ಆಧಾರದಲ್ಲಿ ಮೂರು ಲಕ್ಷದ ಐವತ್ತು ಸಾವಿರ (3,50,000) ರೂಪಾಯಿ ಹಣ ಸಾಲವಾಗಿ ಪಡೆದುಕೊಂಡಿದ್ದ. 28-04-2025 ರಂದು ಒಂದು ಸುಳ್ಳು ಅರ್ಜಿ ಸಂಘಕ್ಕೆ ಸಲ್ಲಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಅವ್ಯವಹಾರ ಮಾಡಿದ್ದಾರೆ ಎಂದು ಆರೋಪಿಸಿ ಪೂರ್ತಿ ಠೇವಣಿ 10 ಲಕ್ಷ ರೂಪಾಯಿ ಬಡ್ಡಿ ಸಹಿತ ನನಗೆ ಮರು ಪಾವತಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದ. ನಿಜ ವಿಚಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿ ಹೇಳಿದರೂ ಪ್ರಕಾಶ ಕೇಳದೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಬೆದರಿಕೆಯೊಡ್ಡಿರುವುದಲ್ಲದೆ ನಂತರ ಪದೆ ಪದೆ ಸಂಘದ ಕಚೇರಿಗೆ ಬಂದು ಸಿಬ್ಬಂದಿಗಳಿಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕುತ್ತಿದ್ದ ಎಂದು ಸಂಘದ ಅಧ್ಯಕ್ಷರಾದ ಪದ್ಮಗೌಡ ಧರ್ಮಸ್ಥಳ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದರು.

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಮೇ.31 ರಂದು ಸದಾಶಿವ.ಓ@ಸುಜಿತ್, ಪ್ರಶಾಂತ.ಬಿ, ಪ್ರಕಾಶ್ ವಿರುದ್ಧ ಕಲಂ -314,316(4),318(3),336(3),306,352,351(2),R/W 3(5) BNS 2023 ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದರು. ಇಬ್ಬರು ಸಿಬ್ಬಂದಿ ಸದಾಶಿವ @ ಸುಜಿತ್‌ ಮತ್ತು ಪ್ರಶಾಂತ್ ನನ್ನು ಮೇ ತಿಂಗಳಲ್ಲಿ ಅಮಾನತು ಮಾಡಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಸದಾಶಿವ @ ಸುಜಿತ್ ನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

Related posts

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya

ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ರಾಷ್ಟ್ರೀಕೃತ ಬ್ಯಾಂಕ್‌ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್

Suddi Udaya

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಪ್ರಾಪ್ತ ಬಾಲಕನ ಅಪಹರಿಸಿ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಯುಟ್ಯೂಬರ್ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Suddi Udaya
error: Content is protected !!