September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿನಾಕಿ ಸಭಾಭವನದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ೨೦೨೫ರ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸುರ್ಯ ಶಾಲೆಯ ಶ್ರೀಮತಿ ಜಯ, ನಿಟ್ಟಡೆ ಶಾಲೆಯ ಶ್ರೀಮತಿ ಆರತಿ, ಪೆರ್ಲ ಬೈಪಾಡಿ ಶಾಲೆಯ ವಿಜಯ ಕುಮಾರ್ ಇವರನ್ನು ಗೌರವಿಸಲಾಯಿತು.

ಅಧ್ಯಕ್ಷತೆಯನ್ನು ಲಯನ್ ಮುರಳಿ ಬಲಿಪ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕುಮಾರ್ ಹೆಗ್ಡೆ ಭಾಗವಹಿಸಿ ಶಿಕ್ಷಕ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕ ಬಂಧುಗಳನ್ನು ಹಾಗೂ ಲಯನ್ಸ್ ಸದಸ್ಯ ಶಿಕ್ಷಕರನ್ನು ವಿಶೇಷವಾಗಿ ಗೌರವಿಸಲಾಯಿತು.
ವೇದಿಕೆಯಲ್ಲಿ ಲಯನ್ಸ್ ಕಟ್ಟಡ ಸಮಿತಿಯ ಅಧ್ಯಕ್ಷ ಎಂ.ಜಿ. ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ದೇವದಾಸ್ ಶೆಟ್ಟಿ, ಲಿಯೋ ಅಧ್ಯಕ್ಷೆ ಡಾ. ಬಾಷಿಣಿ ಉಪಸ್ಥಿತರಿದ್ದರು.

ಲಯನ್ಸ್ ಕ್ಲಬ್‌ನ ಕಾರ್ಯದರ್ಶಿ, ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಅಮಿತಾನಂದ ಹೆಗ್ಡೆ ವಂದಿಸಿದರು. ಪೂರ್ವ ಪ್ರಾಂತ್ಯ ಅಧ್ಯಕ್ಷ ಧರಣೇಂದ್ರ ಕೆ. ಜೈನ್ ಅತಿಥಿಗಳ ಪರಿಚಯಿಸಿದರು. ಪೂರ್ವ ಪ್ರಾಂತ್ಯ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ದಾ ಕಾರ್ಯಕ್ರಮ ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್‌ನ ಪೂರ್ವ ಪ್ರಾಂತ್ಯ ಅಧ್ಯಕ್ಷರುಗಳು, ವಲಯ ಅಧ್ಯಕ್ಷರುಗಳು, ಪೂರ್ವಧ್ಯಕ್ಷರು ಹಾಗೂ ಲಯನ್ಸ್ ಮತ್ತು ಲಿಯೋ ಸದಸ್ಯರು ಭಾಗವಹಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya
error: Content is protected !!